More

    ಮತದಾರನೇ ಭಾರತದ ಭಾಗ್ಯ ವಿಧಾತ:ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಬಣ್ಣನೆ

    ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತ ಚಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕೆಂದು ಮತದಾರರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಕರೆ ನೀಡಿದ್ದಾರೆ.

    ನಗರದ ಟೌನ್‌ಹಾಲ್‌ನಲ್ಲಿ ಗುರುವಾರ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಮತದಾರರ’ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮತದಾರರು ಮುಂಚೂಣಿಯಲ್ಲಿದ್ದಾರೆ. ಜಗತ್ತಿನಲ್ಲಿ ಹಲವು ರೀತಿಯ ಆಡಳಿತ ವ್ಯವಸ್ಥೆಗಳಿವೆ. ಜತೆಗೆ, ಪ್ರಪಂಚದ ವಿವಿಧ ದೇಶಗಳಲ್ಲಿ ಹಲವು ರೀತಿಯ ಮತದಾನ ವ್ಯವಸ್ಥೆಗಳಿವೆ. ಭಾರತದಲ್ಲಿ ನೇರ ಚುನಾವಣಾ ಮತದಾನ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ ಎಂದರು.

    ಭಾರತದಲ್ಲಿಯೂ ಮತದಾನವನ್ನು ಕಡ್ಡಾಯಗೊಳಿಸುವ ಬಗ್ಗೆ ಚರ್ಚೆಗಳು ನಡೆದಿವೆ. ಮತದಾರರನ್ನು ಪ್ರೇರೇಪಿಸುವ ಮೂಲಕ ಮಾತ್ರ ಮತದಾನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು. 18 ವರ್ಷ ಮೇಲ್ಪಟ್ಟವರಿಗೆ ಮತದಾನದ ಹಕ್ಕು ನೀಡಲಾಗಿದೆ. ಯುವಕರು ಮುಂದೆ ಬಂದು ದೇಶದ ನಾಯಕತ್ವದಲ್ಲಿ ತಮ್ಮ ಪಾತ್ರ ನಿರ್ವಹಿಸಬೇಕು.ಸಮಾಜದ ಪ್ರಜ್ಞಾಪೂರ್ವಕ ಮತ್ತು ಜವಾಬ್ದಾರಿಯುತ ನಾಗರಿಕರಾಗಬೇಕು.ಪ್ರಜಾಪ್ರಭುತ್ವವನ್ನು ಬಲಪಡಿಸಲು ಕೆಲಸ ಮಾಡಬೇಕು. ಮತದಾನ ಮಾಡುವ ಮತದಾರರೇ ಭಾರತದ ಭಾಗ್ಯ ವಿಧಾತರು ಎಂದು ಥಾವರ್‌ಚಂದ್ ಗೆಹಲೋತ್ ಬಣ್ಣಿಸಿದರು.
    ಮತದಾರರ ಪಟ್ಟಿ ಪರಿಷ್ಕರಣೆ,ಸೇರ್ಪಡೆ ಸೇರಿ ಇತರೆ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಅಧಿಕಾರಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಲಾಯಿತು. ‘ನಾ ಭಾರತ ಕನ್ನಡ ಹಾಡು ಅನಾವರಣ’ ಅನಾವರಣಗೊಳಿಸಲಾಯಿತು. ಮೊದಲನೆ ಬಾರಿ ಮತದಾನ ಮಾಡುವ ಯುವ ಮತದಾರರು, ವಿಕಲ ಚೇತನರು, ತೃತೀಯಲಿಂಗಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಇದೇ ವೇಳೆ ಬ್ಯಾಡ್ಜ್ ವಿತರಿಸಿ ಮತದಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕುರುಮರಾವ್ ಮತ್ತಿತರರಿದ್ದರು.

    ಸಿಎಂಗೆ 2,100 ರೂ. ಚೆಕ್ ವಾಪಸ್ ಕೊಟ್ಟ ರೈತರು; ಹೆಕ್ಟೆರ್‌ಗೆ 17 ಸಾವಿರ ರೂ. ಪರಿಹಾರಕ್ಕೆ ರಾಜ್ಯ ರೈತ ಸಂಘ ಆಗ್ರಹ

    ಗಣರಾಜ್ಯಕ್ಕೆ ತ್ಯಾಗ:
    ಚುನಾವಣೆಯಲ್ಲಿ ಮತದಾನ ಮಾಡುವುದು ಗಣರಾಜ್ಯಕ್ಕೆ ತ್ಯಾಗ ಮಾಡಿದಂತೆ. ಅಲ್ಲಿ ಪ್ರತಿ ಮತವೂ ಯಜ್ಞವಿದ್ದಂತೆ. ಒಂದು ವೋಟು ಹಾಕದಿದ್ದರೆ ಏನಾಗುತ್ತದೋ ಎಂದು ಕೆಲವರು ಚುನಾವಣಾ ಸಮಯದಲ್ಲಿ ತಮ್ಮ ಮತವನ್ನು ಬಳಸುವುದಿಲ್ಲ. ವಾಸ್ತವವಾಗಿ ಹಲವು ಬಾರಿ ಗೆಲುವು ಅಥವಾ ಸೋಲಿನ ನಿರ್ಧಾರ ಕೇವಲ ಒಂದು ಮತವನ್ನು ಅವಲಂಬಿಸಿರುತ್ತದೆ. ಚುನಾವಣೆಯನ್ನು ಅರ್ಥಪೂರ್ಣಗೊಳಿಸುವಲ್ಲಿ ಎಚ್ಚರಿಕೆ ಮತ್ತು ಜಾಗೃತ ಮತದಾರರು ಪಾತ್ರ ಪ್ರಮುಖ ಎಂದು ರಾಜ್ಯಪಾಲರು ಹೇಳಿದರು. ಮತದಾನ ನಮ್ಮ ಹಕ್ಕು ಮತ್ತು ಕರ್ತವ್ಯ. ಭಾರತದ ಚುನಾವಣಾ ಆಯೋಗವು ಸ್ವೀಪ್ ಅಡಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿದೆ.ಅರ್ಹ ಮತದಾರರ ಹೆಸರನ್ನು ಬಿಟ್ಟು ಹೋಗಬಾರದು. ಈ ಹಿನ್ನೆಲೆಯಲ್ಲಿ ಕರ್ನಾಟಕ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯಲ್ಲಿ ಅರ್ಹರ ಹೆಸರನ್ನು ಸೇರಿಸುವ ಮತ್ತು ಅನರ್ಹರ ಹೆಸರನ್ನು ತೆಗೆದುಹಾಕುವ ಕೆಲಸವನ್ನು ಪಾರದರ್ಶಕತೆ ಮತ್ತು ಜವಾಬ್ದಾರಿಯಿಂದ ಮಾಡುತ್ತಿದೆ ಎಂದು ಬಣ್ಣಿಸಿದರು.

    ಕೋಟ್:
    ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ ತಪ್ಪದೆ ಮತ ಚಲಾಯಿಸುವಂತಾಗಬೇಕು.ದೇಶದ ಪ್ರತಿಯೊಬ್ಬ ಮತದಾರರು ಜಾಗೃತರಾಗಿರಬೇಕು. ಯುವ ಮತದಾರರು, ವಿಕಲಚೇತನರು, ತೃತೀಯ ಲಿಂಗಿಗಳು ಹಾಗೂ ಬುಡಕಟ್ಟು ಜನಾಂಗದವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಕೆಲಸ ಮಾಡಲಾಗುತ್ತಿದೆ. ಯುವ ಮತದಾರರು ಸ್ವಯಂಪ್ರೇರಿತವಾಗಿ ಪಟ್ಟಿಯಲ್ಲಿ ಸೇರ್ಪಡೆಯಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತಾಗಬೇಕು.
    ಮನೋಜ್ ಕುಮಾರ್ ಮೀನಾ, ಮುಖ್ಯ ಚುನಾವಣಾಧಿಕಾರಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts