More

    ಮತದಾರರೇ ಸಂವಿಧಾನ ಉಳಿಸಲು ಮುಂದಾಗಿ

    ಚಿಕ್ಕಮಗಳೂರು: ಬಡವರ ಆರ್ಥಿಕ ಜೀವನ ಸುಧಾರಣೆಗೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವುದನ್ನು ಚರ್ಚಿಸುವ ಬಿಜೆಪಿ ದೊಡ್ಡ ದೊಡ್ಡ ಉದ್ಯಮಿಗಳ ಲಕ್ಷಾಂತರ ಕೋಟಿ ರೂ. ಸಾಲಮನ್ನಾ ಮಾಡಿರುವ ಕೇಂದ್ರ ಸರ್ಕಾರದ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.
    ನಗರದ ಹೊರವಲಯದ ಹಿರೇಮಗಳೂರು ಹಾಗೂ ನರಿಗುಡ್ಡೇನಹಳ್ಳಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದ ಅಡಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಪಕ್ಷ ಕಾಂಗ್ರೆಸ್. ಆದರೆ ಸಂವಿಧಾನ ಬದಲಿಸುತ್ತೇವೆ ಎಂದು ಹೊರಟಿರುವವರು ಬಿಜೆಪಿಗರು. ಹೀಗಾಗಿ ಇಂದು ಸಂವಿಧಾನ ಅಪಾಯದಲ್ಲಿದೆ. ಸಂವಿಧಾನ ಉಳಿಸಲು ಮತದಾರರು ಯೋಚನೆ ಮಾಡಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.
    ಜಿಲ್ಲೆಯಲ್ಲಿ 10 ವರ್ಷದಿಂದ ಸಂಸದರಾಗಿದ್ದವರು ಏನೂ ಅಭಿವೃದ್ಧಿ ಮಾಡದೇ ಜಿಲ್ಲೆಯ ಶೋಭೆ ಹಾಳು ಮಾಡಿದ್ದಾರೆ. ಅಡಕೆ, ಕಾಫಿ ಬೆಳೆಗಾರರಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ರೈತರಿಗೆ ಪರಿಹಾರ ಕೊಡಿಸಲೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಂಥವರಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕಿಡಿಕಾರಿದರು.
    ನಾನು 20 ತಿಂಗಳ ಸಂಸದನಾಗಿದ್ದಾಗ ಚಿಕ್ಕಮಗಳೂರಿಗೆ ರೈಲ್ವೇ, ರಾಷ್ಟ್ರೀಯ ಹೆದ್ದಾರಿಗಳು, ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಿದ್ದೆ. ಆಗ ನಾನು ಮಂಜೂರು ಮಾಡಿಸಿದ ಕಾಮಗಾರಿಗಳನ್ನು ಸಂಸದರಿಗೆ ಇದುವರೆಗೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸ ಹಾಗೂ ನಂಬಿಕೆ ಇರಿಸಿ ನನಗೆ ಮತ ನೀಡಿ ಗೆಲ್ಲಿಸಿದೆ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರ ಹಾಗೂ ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts