More

    ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ

    ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
    ನಮ್ಮ ಪ್ರಜಾಪ್ರಭುತ್ವದ ಭಾರತದಲ್ಲಿ ಗ್ರಾಪಂ ಚುನಾವಣೆಯಿಂದ ಲೋಕಸಭೆವರೆಗೂ ನಮಗೆ ಬೇಕಾದ ಜನನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಸಂವಿಧಾನದಲ್ಲಿ 18 ವರ್ಷ ತುಂಬಿದ ಭಾರತದ ಪ್ರತಿಯೊಬ್ಬ ಪ್ರಜೆಗೂ ಮತ ಚಲಾಯಿಸುವ ಹಕ್ಕು ನೀಡಲಾಗಿದೆ ಎಂದು ತಹಸೀಲ್ದಾರ್ ಶಿವರಾಜ್ ಹೇಳಿದರು.
    ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿ ಮಾತನಾಡಿದರು.
    18 ವರ್ಷಕ್ಕೆ ಕಾಲಿಟ್ಟ ಎಲ್ಲರೂ ಮತದಾರರಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಮತದಾರರ ಗುರುತಿನ ಚೀಟಿ ಪಡೆದು ಮತದಾನ ಮಾಡಬೇಕು. ಪ್ರತಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು ಎಂದರು.
    ಮತದಾನ ಮಾಡುವುದು ನಾಗರಿಕರ ಹಕ್ಕು ಮತ್ತು ಕರ್ತವ್ಯ. ಸುಸ್ಥಿರ ಸುಭದ್ರ ಆಡಳಿತ ನೀಡುವ ನಾಯಕತ್ವದ ಸರ್ಕಾರ ರಚನೆಗೆ ಮತದಾರರ ಪಾತ್ರ ಪ್ರಮುಖವಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಹಕ್ಕು ಚಲಾಯಿಸಿ ಎಂದರು.
    ಜ.22ರ ವರೆಗೂ ದೇವನಹಳ್ಳಿ ಕ್ಷೇತ್ರದಲ್ಲಿ 1,07,640 ಮಹಿಳಾ, 1,05,753 ಪುರುಷ ಮತ್ತು 15 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 2,13,408 ಮತದಾರರಿದ್ದಾರೆ ಎಂದು ತಿಳಿಸಿದರು.
    ತಾಪಂ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥಗೌಡ ಮಾತನಾಡಿ, ನೋಂದಾಯಿತ ಮತದಾರರಿಗೆ ಜಾಗೃತಿ ಮೂಡಿಸಲು ಹಾಗೂ ಯುವ ಮತದಾರರಿಗೆ ಹೊಸ ಗುರುತಿನ ಚೀಟಿ ವಿತರಿಸಲು ಜ.25 ರಂದು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತದೆ. ಯುವಕರು ಮತದಾನದ ಮಹತ್ವ ಸಾರುವ ರಾಯಭಾರಿಗಳಾಗಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈಜೊಡಿಸಿ ಎಂದರು.
    ಯುವ ಮತದಾರರಗೆ ಗುರುತಿನ ಚೀಟಿ ವಿತರಿಸಿ, ಮತದಾನ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts