More

    ರಾಜಧಾನಿ ಜನತೆ ನಿರ್ಭೀತಿಯಿಂದ ಮತದಾನ ಮಾಡಿ: ಪಿ.ಎನ್.ರವೀಂದ್ರ

    ಬೆಂಗಳೂರು: ನಗರದ ಜನತೆ ಪ್ರವಾಸಕ್ಕೆ ತೆರಳದೆ ಮೇ 10ರಂದು ಮತಗಟ್ಟೆ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಬಿಬಿಎಂಪಿಯ ವಿಶೇಷ ಆಯುಕ್ತ ಪಿ.ಎನ್.ರವೀಂದ್ರ ಹೇಳಿದ್ದಾರೆ.

    ಸಂಜಯ್ ಗಾಂಧಿ ಶಿಕ್ಷಣ ವಿದ್ಯಾಲಯ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಬಿಬಿಎಂಪಿ ಕಂದಾಯ ಅಧಿಕಾರಿ ಹೆಬ್ಬಾಳ ವಿಭಾಗ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ‘ಜಾಥಾ’ ಕಾರ್ಯಕ್ರಮದಲ್ಲಿ ಮಾತನಾಡಿದರು.

    ನಿರ್ಭೀತಿಯಿಂದ ಮತದಾನ ಮಾಡಿ

    ಹಿಂದಿನ ಬಹುತೇಕ ಚುನಾವಣೆಗಳಲ್ಲಿ ಬೆಂಗಳೂರು ನಗರ ಪ್ರದೇಶದಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿತ್ತು. ಹೀಗಾಗಿ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಶತಾಯ ಗತಾಯವಾಗಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಿಸಲು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಭಯಮುಕ್ತ ಮತ್ತು ನಿರ್ಭೀತಿಯಿಂದ ಮತದಾನ ಮಾಡಲು ಎಲ್ಲ ವ್ಯವಸ್ಥೆ ಮಾಡಲಾಗಿದೆ.

    awareness
    ಮತದಾನ ಜಾಗೃತಿ

    ರಾಜಧಾನಿ ಜನರು ಮನೆಯಿಂದ ಹೊರಬಂದು ಮತದಾನಕ್ಕೆ ಮನಸ್ಸು ಮಾಡಬೇಕು. ಈ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಗೊಳಿಸಬೇಕು. ಕಳೆದ ಬಾರಿ ಡಾಲರ್ಸ್ ಕಾಲನಿಯಲ್ಲಿ ಕಾಲನಿಯಲ್ಲಿ ಶೇ.38 ಮತದಾನವಾಗಿತ್ತು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡಬೇಕೆಂದು ಮನವಿ ಮಾಡಿದ್ದಾರೆ.

    ಡಾಲರ್ಸ್ ಕಾಲನಿಯ ಪ್ರಮುಖ ರಸ್ತೆಗಳಲ್ಲಿ ಕ್ಯಾಂಡಲ್ ಲೈಟ್ ಜಾಥಾ ನಡೆಯಿತು. ಗೊಂಬೆಗಳ ನೃತ್ಯ ಪ್ರದರ್ಶನ ನೋಡುಗರ ಗಮನ ಸೆಳೆಯಿತು. ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್, ಅಪರ ಜಿಲ್ಲಾ ಚುನಾವಣಾಧಿಕಾರಿ (ಉತ್ತರ) ಲಿಂಗಮೂರ್ತಿ, ಪೂರ್ವ ವಲಯದ ಜಂಟಿ ಆಯುಕ್ತೆ ಕೆ.ಆರ್.ಪಲ್ಲವಿ, ಹೆಬ್ಬಾಳ ವಿಭಾಗದ ಕಂದಾಯ ಅಧಿಕಾರಿ ಶ್ರೀನಿವಾಸ್ ಮೂರ್ತಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts