More

    ಜಗಳೂರು ತಾಲೂಕಿನಲ್ಲಿ ಮತದಾನ ಜಾಗೃತಿ ಅಭಿಯಾನ

    ಜಗಳೂರು: ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ಬುಧವಾರ ಗ್ರಾಮ ಪಂಚಾಯಿತಿ ವತಿಯಿಂದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು.

    ಗ್ರಾಮದ ಅರಸೀಕೆರೆ ರಸ್ತೆಯ ಹಳ್ಳದಲ್ಲಿ ನರೇಗಾ ಯೋಜನೆಯಡಿ ಕೈಗೆತ್ತಿಕೊಂಡಿರುವ ಹೂಳೆತ್ತುವ ಕಾಮಗಾರಿಯಲ್ಲಿ ಪಾಲ್ಗೊಂಡಿದ್ದ ನೂರಾರು ಕೂಲಿಕಾರರಿಗೆ ಮತದಾನ ಮಾಡುವ ಕುರಿತು ಮಾಹಿತಿ ನೀಡಲಾಯಿತು.

    ಈ ಸಂದರ್ಭದಲ್ಲಿ ಗ್ರಾಪಂ ಪಿಡಿಒ ತಿಮ್ಮಪ್ಪ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಮೇ 7ರಂದು ಲೋಕಸಭೆ ಚುನಾವಣೆ ನಡೆಯಲಿದೆ. ಹಾಗಾಗಿ, ಮತದಾನ ಹಕ್ಕು ಹೊಂದಿರುವ ಪ್ರತಿಯೊಬ್ಬ ಪೌರನು ಮತದಾನ ಮಾಡುವುದು ಕಡ್ಡಾಯ ಎಂದರು.

    ಮತದಾನವು ಯುನೈಟೆಡ್ ಸ್ಟೇಟ್ಸ್‌ನ ನಾಗರಿಕರಾಗಿ ನಾವು ಹೊಂದಿರುವ ಪ್ರಮುಖ ಹಕ್ಕುಗಳಲ್ಲಿ ಒಂದಾಗಿದೆ. ಮತದಾನವು ಮೂಲಭೂತ ಹಕ್ಕುಗಳ ಜತೆಗೆ ನಮ್ಮ ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದಲೂ ಮುಖ್ಯ. ಆದ್ದರಿಂದ ಜನರಲ್ಲಿ ಜಾಗೃತಿ ಮೂಡಿಸಿ ಶೇ. 100 ಮತದಾನ ಮಾಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಕಾರ್ಯದರ್ಶಿ ಎಚ್.ಎಂ. ರಾಜು, ಕರ ವಸೂಲಿಗಾರ ಕರಿಬಸಪ್ಪ, ಕಂಪ್ಯೂಟರ್ ಆಪರೇಟರ್ ಎಚ್. ತಿಮ್ಮಪ್ಪ ಸೇರಿದಂತೆ ನೂರಾರು ಕೂಲಿಕಾರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts