More

    ಮತದಾನ ಜಾಗೃತಿ ಪ್ರತಿಯೊಬ್ಬರ ಕರ್ತವ್ಯ

    ಸಂಡೂರು: ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಂಡೂರು ತಾಲೂಕು ಚುನಾವಣಾಧಿಕಾರಿ ಶರಣಬಸವರಾಜು ಹೇಳಿದರು.

    ತಾಲೂಕು ಆಡಳಿತ, ಸ್ವೀಪ್‌ಸಮಿತಿ, ಮತದಾರ ಸಾಕ್ಷರತಾ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕು. ಸ್ವಸಹಾಯ ಸಂಘಗಳ ಸದಸ್ಯರು ಮತದಾರರಿಗೆ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.

    ತಾಪಂ ಇಒ ಎಚ್.ಷಡಕ್ಷರಯ್ಯ ಮಾತನಾಡಿ, ರಾಜ್ಯ ಚುನಾವಣಾ ಆಯೋಗ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನಿರ್ದೇಶನದಂತೆ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮತದಾನ ಬಗ್ಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

    ಮತದಾರರ ಸಾಕ್ಷರತಾ ಸಂಘದ ತಾಲೂಕು ನೋಡಲ್ ಅಧಿಕಾರಿ ಜಿ.ಎಂ.ಪ್ರದೀಪ್ ಕುಮಾರ್ ಮಾತನಾಡಿ, ನಿಗದಿತ ವೇಳಾಪಟ್ಟಿಯಂತೆ ಮುಂದಿನ ದಿನಗಳಲ್ಲಿ ಎತ್ತಿನ ಬಂಡಿ ಉತ್ಸವ, ರಂಗೋಲಿ ಸ್ಪರ್ಧೆ, ಬೀದಿ ನಾಟಕ, ಅಂಗನವಾಡಿ ಕಾರ್ಯಕರ್ತೆಯರ ಜಾಥಾ ಕಾರ್ಯಕ್ರಮ, ಅಂಗವಿಕಲರ ತ್ರಿಚಕ್ರ ವಾಹನ ಜಾಥಾ, ಮ್ಯಾರಥಾನ್ ಓಟ, ವೋಟರ್ಸ್ ಕಪ್ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು.

    ಎಮ್.ಟಿ.ಮಹಾಂತೇಶ್ ಮತದಾರರಿಗೆ ಪ್ರತಿಜ್ಞಾವಿಧಿ ಭೋಧಿಸಿದರು.ಪುರಸಭೆ ಮುಖ್ಯ ಅಧಿಕಾರಿ ಎಂ.ಖಾಜಾಮೈನುದ್ದಿನ್, ನರೇಗಾ ಸಹಾಯಕ ನಿರ್ದೇಶಕ ರೇಣುಕಾಚಾರ್ಯ ಸ್ವಾಮಿ, ಪ್ರಭುರಾಜ್ ಹಗರಿ, ರೋಷನ್ ಇತರರಿದ್ದರು.

    ಇದನ್ನೂ ಓದಿ: Election awareness program ಚುನಾವಣೆ ಜಾಗೃತಿ ಕಾರ್ಯಕ್ರಮ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts