More

  ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮತದಾನ ಜಾಗೃತಿ

  ಮೈಸೂರು: ನಗರದ ಡಾ. ಚಂದ್ರಶೇಖರ್ ಫೌಂಡೇಶನ್, ಕಾವೇರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್‌ನಿಂದ ಸೋಮವಾರ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮತದಾನ ಜಾಗೃತಿ ಮೂಡಿಸಲು ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
  ನಗರದ ರೈಲ್ವೆ ನಿಲ್ದಾಣದ ಮುಂಭಾಗದಿಂದ ಆರಂಭಗೊಂಡ ಜಾಥಾಕ್ಕೆ ಕಾವೇರಿ ಗ್ರೂಪ್ ಆಫ್‌ಇನ್ಸ್ಟಿಟ್ಯೂಷನ್ ಅಧ್ಯಕ್ಷ ಡಾ.ಜಿ.ಆರ್.ಚಂದ್ರಶೇಖರ್ ಚಾಲನೆ ನೀಡಿ, ಮತದಾನದ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು. ವ್ಯವಸ್ಥಾಪಕ ನಿರ್ದೇಶಕಿ ಡಾ.ಸರಳಾ ಚಂದ್ರಶೇಖರ್ ಮತಜಾಗೃತಿ ಕುರಿತು ಮಾತನಾಡಿದರು.
  ಕಾವೇರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಡೀನ್ ಪ್ರೊ.ಎಸ್. ಶ್ರೀಕಂಠಸ್ವಾಮಿ, ಪ್ರಾಂಶುಪಾಲರು, ಪ್ರಾಧ್ಯಾಪಕರು, ಸಿಬ್ಬಂದಿ ಇತರರು ಇದ್ದರು. ಜಾಥಾದಲ್ಲಿ ಕಾವೇರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್‌ನ ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಫಿಸಿಯೋಥೆರಪಿ, ಫಾರ್ಮಸಿ, ನರ್ಸಿಂಗ್ ಹಾಗೂ ಅಲೈಡ್ ಹೆಲ್ತ್ ಸೈನ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
  ದಾಸಪ್ಪ ವೃತ್ತ, ಜನರಲ್ ಕಾರ್ಯಪ್ಪ ವೃತ್ತ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವೃತ್ತ, ರಾಮಸ್ವಾಮಿ ವೃತ್ತ, ಜಿಲ್ಲಾ ನ್ಯಾಯಾಲಯದ ಮುಂಭಾಗದ ಮಹಾತ್ಮಗಾಂಧಿ ವೃತ್ತದಲ್ಲಿ ವಿದ್ಯಾರ್ಥಿಗಳು ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಿರು ನಾಟಕಗಳನ್ನು ಪ್ರದರ್ಶಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts