ಬೆಳಗಾವಿ: ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ

ಬೆಳಗಾವಿ: ಮತದಾನ ಪ್ರತಿಯೊಬ್ಬರ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಸಂವಿಧಾನ ನೀಡಿರುವ ಪವಿತ್ರವಾದ ಹಕ್ಕನ್ನು ಚಲಾಯಿಸುವುದರ ಮೂಲಕ ದೇಶದ ಕಟ್ಟುವ ಕಾಯಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ದಂಡು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವ್ಯ ಹೊಸೂರ ಹೇಳಿದರು.

ಮಂಗಳವಾರ ಬೆಳಗ್ಗೆ ದಂಡು ಮಂಡಳಿ ವ್ಯಾಪ್ತಿಯಲ್ಲಿರುವ ಕ್ಯಾಂಪ್ ಪ್ರದೇಶದಲ್ಲಿರುವ ಶಾಲಾ-ಕಾಲೇಜುಗಳ ಆವರಣದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೇ ತಮ್ಮ ಅತ್ಯಮೂಲ್ಯವಾದ ಮತದಾನದಲ್ಲಿ ದೇಶದ ಭವಿಷ್ಯವೇ ಅಡಗಿದೆ. ಅದಕ್ಕಾಗಿ ಲೋಕಸಭಾ ಚುನಾವಣೆಯ ಮತದಾನ ದಿನವಾಗಿರುವ ಏ.23ರಂದು ತಪ್ಪದೇ ಮತಚಲಾವಣೆ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕ್ಯಾಂಪ್ ಪ್ರದೇಶದ ಪ್ರಮುಖ ರಸ್ತೆಗಳಾದ ಇಂಡಿಪೆಂಡೆಂಡ್ ರಸ್ತೆ, ಹ್ಯಾವಲೆಟ್ ರಸ್ತೆ, ಹೈಸ್ಟ್ರೀಟ್ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಮತದಾನ ಜಾಗೃತಿಜಾಥಾದ ಮೆರವಣಿಗೆ ನಡೆಯಿತು. ಕನ್ನಡ, ಇಂಗ್ಲೀಷ, ಮರಾಠಿ, ಉರ್ದು ಮಾಧ್ಯಮ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಐಕಾನ್ ಆಗಿರುವ ರಾಘವೇಂದ್ರ ಅನ್ವೇಕರ್, ಡಿಎಚ್‌ಒ ಡಾ.ಅಪ್ಪಾಸಾಬ ನರಟ್ಟಿ, ಪಾಲಿಕೆ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ, ಜಿಲ್ಲಾ ಸ್ವೀಪ್ ಸಹಾಯಕ ಅಧಿಕಾರಿ ರವಿ ಭಜಂತ್ರಿ, ತಾಲೂಕು ಯೋಜನಾಧಿಕಾರಿ ಸಿ.ಪಿ.ದೇಶಪಾಂಡೆ ಸೇರಿದಂತೆ ಅನೇಕ ಅಧಿಕಾರಿಗಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *