More

  ಮೇ 7ರಂದು ಕಡ್ಡಾಯವಾಗಿ ಮತದಾನ ಮಾಡಿ; ಸೋಮಶೇಖರ

  ರಾಣೆಬೆನ್ನೂರ: ಮೇ 7ರಂದು ನಡೆಯುವ ಪ್ರಜಾಪ್ರಭುತ್ವ ಹಬ್ಬದಲ್ಲಿ ಸಕ್ರೀಯವಾಗಿ ಭಾಗವಹಿಸಿ, ಪ್ರತಿಯೊಬ್ಬ ಮತದಾರರು ಮತ ಚಲಾಯಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ ಹೇಳಿದರು.
  ನಗರದ ಮುನ್ಸಿಪಲ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ತಾಲೂಕು ಸ್ವೀಪ್ ಸಮಿತಿ, ನಗರಸಭೆ, ತಾಪಂ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
  ಮುನ್ಸಿಪಲ್ ಮೈದಾನದಿಂದ ಆರಂಭಗೊಂಡ ಜಾಥಾ ಹಳೆ ಪಿ.ಬಿ. ರಸ್ತೆ ಮೂಲಕ ಬಸ್ ನಿಲ್ದಾಣ ವೃತ್ತ, ಪೋಸ್ಟ್ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಾಂಜ್ ಮೇಳದವರು, ಸಂಗೀತ ಮತ್ತು ನೃತ್ಯ, ವಿದ್ಯಾರ್ಥಿಗಳು ಹಿಡಿದಿದ್ದ ಮತದಾನ ಜಾಗೃತಿ ಪ್ಲೇ ಕಾರ್ಡ್‌ಗಳು ಜನರನ್ನು ಆಕರ್ಷಿಸಿದವು.
  ನಗರಸಭೆ ಆಯುಕ್ತ ನಿಂಗಪ್ಪ ಕುಮ್ಮಣ್ಣನವರ, ತಾಲೂಕು ಸಹಾಯಕ ಚುನಾವಣಾಧಿಕಾರಿ ರೇಷ್ಮಾಬಾನು ಕೌಸರ್, ತಹಸೀಲ್ದಾರ್ ಸುರೇಶಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ಸಹಾಯಕ ತೋಟಗಾರಿಕೆ ಹಿರಿಯ ನಿರ್ದೇಶಕ ನೂರಅಹ್ಮದ್ ಹಲಗೇರಿ, ಪ್ರಮುಖರಾದ ನೀಲಕಂಠಪ್ಪ ಅಂಗಡಿ, ಪರಶುರಾಮ ಪೂಜಾರ, ನರೇಗಾ ಸಂಚಾಲಕ ಡಿ.ವಿ.ಅಂಗೂರ ಹಾಗೂ ವಿವಿಧ ಶಾಲಾ ಕಾಲೇಜ್ ವಿದ್ಯಾರ್ಥಿಗಳು ಪಾಲ್ಗೊಂ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts