More

    ಮತದಾನ ಬಹಿಷ್ಕಾರ ನಿರ್ಧಾರ ವಾಪಸ್

    ಗುಂಡ್ಲುಪೇಟೆ: ಮೂಲ ಸೌಕರ್ಯ ಕಲ್ಪಿಸಿಲ್ಲ ಎಂಬ ಕಾರಣಕ್ಕೆ ಮತದಾನದಿಂದ ದೂರ ಉಳಿಯಲು ನಿರ್ಧರಿಸಿದ್ದ ಮುಂಟೀಪುರ ಹಾಗೂ ಬರಗಿ ಕಾಲನಿ ಜನರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

    ಬುಧವಾರ ಗ್ರಾಮಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ರಾಮಲಿಂಗಯ್ಯ, ಭೂಮಾಪನಾ ಇಲಾಖೆ ಸಹಾಯಕ ನಿರ್ದೇಶಕ ರವಿನಾಯಕ್ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಮುಂಟೀಪುರ ಹಾಗೂ ಬರಗಿ ಕಾಲನಿಯಲ್ಲಿನ ಸಮಸ್ಯೆಗಳ ಕುರಿತು ‘ವಿಜಯವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಯನ್ನು ಜಿಲ್ಲಾಧಿಕಾರಿ ಗಮನಿಸಿದ್ದಾರೆ. ಅಲ್ಲದೆ, ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಪರಿಗಣಿಸಲಾಗುತ್ತದೆ.

    ಚುನಾವಣೆ ಮುಗಿದ ಕೂಡಲೇ ಏ.27ರಂದು ಗ್ರಾಮದಲ್ಲಿ ಸರ್ವೇ ನಡೆಸಿ ಮನೆ ಹಾಗೂ ಸಾಗುವಳಿ ಜಮೀನನ್ನು ಫಲಾನುಭವಿಗಳ ಹೆಸರಿಗೆ ಖಾತೆ ಮಾಡಿಕೊಡಲಾಗುತ್ತದೆ ಎಂದು ಅಧಿಕಾರಿಗಳು ಭರವಸೆ ನೀಡಿದರು. ಬಳಿಕ ಗ್ರಾಮಸ್ಥರು ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts