More

    ಮೇ 7ರಂದು ಶಿವಮೊಗ್ಗದಲ್ಲಿ ಮತದಾನ

    ಶಿವಮೊಗ್ಗ: ಈ ಬಾರಿಯ ಲೋಕಸಭೆ ಚುನಾವಣೆಗೆ ಅಂತೂ ಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಶಿವಮೊಗ್ಗ ಕ್ಷೇತ್ರದಲ್ಲಿ ಮ 7ರಂದು ಮತದಾನ ನಡೆಯಲಿದೆ. ಏ.12ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಏ.19 ಕಡೆಯ ದಿನವಾಗಿದೆ. ಏ.20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ.4ರಂದು ಮತಗಳ ಎಣಿಕೆ ನಡೆಯಲಿದೆ.

    ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಒಟ್ಟು 17,29,901 ಮಂದಿ ಮತದಾನ ಮಾಡುವ ಅವಕಾಶ ಹೊಂದಿದ್ದಾರೆ. ಈ ಪೈಕಿ 29,788 ಮಂದಿ ಮೊದಲ ಬಾರಿಗೆ ಹಕ್ಕು ಚಲಾಯಿಸಲಿದ್ದಾರೆ. ಪುರುಷ ಮತದಾರರಿಗಿಂತಲೂ ಮಹಿಳೆಯರ ಸಂಖ್ಯೆಯೇ ಅಧಿಕವಾಗಿದೆ.
    ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಶನಿವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ, ಚುನಾವಣೆ ಸಿದ್ಧತೆಗಳ ಬಗ್ಗೆ ವಿವರಣೆ ನೀಡಿದರು. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ(ಏ.19)ರೊಳಗೆ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಮತದಾರರ ಪಟ್ಟಿ ತಿದ್ದುಪಡಿಗೂ ಅವಕಾಶವಿದೆ ಎಂದರು.
    ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು. ಈಗಾಗಲೇ ಚುನಾವಣಾ ಸಂಬಂಧಿ ದೂರುಗಳನ್ನು ಸ್ವೀಕರಿಸಲು ಪ್ರತಿ ವಿಧಾನಸಭಾ ಕ್ಷೇತ್ರವಾರು ಕಂಟ್ರೋಲ್ ರೂಂ ತೆರೆಯಲಾಗಿದೆ. ಟೋಲ್ ಫ್ರೀ ಸಂಖ್ಯೆ 1950ಗೆ ಕರೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ದೂರು ನೀಡಬಹುದಾಗಿದೆ ಎಂದು ತಿಳಿಸಿದರು.
    ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆಗೆ 8,600 ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ವಿಧಾನಸಭಾ ಕ್ಷೇತ್ರವಾರು ಎಆರ್‌ಒಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದರು. ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts