More

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ವಿಶೇಷ ಹಕ್ಕು

    ರಾಯಚೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ನೀಡಲಾಗಿರುವ ಮತದಾನದ ಹಕ್ಕು ವಿಶೇಷ ಹಕ್ಕಾಗಿದ್ದು, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
    ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿ, ಮತದಾನದ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದರು.
    ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಮರ್ಪಕ ರೀತಿಯಲ್ಲಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ನಾಗರಿಕರದ್ದಾಗಿದ್ದು, ಅರ್ಹ ಮತದಾರರು ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿದ ಮಾತ್ರ ಮತದಾನದ ಹಕ್ಕು ಸಾಕಾರಗೊಳ್ಳಲಿದೆ.
    ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಜತೆಗೆ ಅರ್ಹ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
    ಕಾರ್ಯಕ್ರಮದಲ್ಲಿ ಪಿಯು ಡಿಡಿಪಿಐ ಸೋಮಶೇಖರಪ್ಪ ಹೊಕ್ರಾಣಿ, ಯೋಜನಾಕಾರಿ ಆರ್.ಇಂದಿರಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಯಂಕಣ್ಣ ಹಾಗೂ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts