More

    18 ವರ್ಷ ತುಂಬಿದ ಎಲ್ಲರೂ ಕಡ್ಡಾಯ ಮತದಾನ ಮಾಡಿ

    ಮೈಸೂರು: 18 ವರ್ಷ ತುಂಬಿದ ಎಲ್ಲರಿಗೂ ಮತದಾನದ ಮೂಲಕ ತನ್ನ ಕ್ಷೇತ್ರದ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಸಂವಿಧಾನ ಕಲ್ಪಿಸಿದ್ದು, ಯೋಗ್ಯರನ್ನು ಆಯ್ಕೆ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಬೇಕಿದೆ.

    ಲೋಕಸಭಾ ಚುನಾವಣೆಯ ಮತದಾನ ಏ.26ರಂದು ನಡೆಯಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಬೇಕಾದರೆ ಚುನಾವಣೆಯಲ್ಲಿ ಮತದಾರರ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯ. ಕೇವಲ ಪಾಲ್ಗೊಳ್ಳುವಿಕೆ ಮಾತ್ರ ಹೆಚ್ಚಾದರೆ ಸಾಲದು ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆದು ಯೋಗ್ಯ ಅಭ್ಯರ್ಥಿಗಳ ಆಯ್ಕೆ ಕೂಡ ಆಗಬೇಕಾಗಿದೆ.

    ಆದರೆ, ಇತ್ತೀಚಿನ ವರ್ಷಗಳಲ್ಲಿ ಉದ್ಯೋಗದಲ್ಲಿರುವವರು ಚುನಾವಣೆಯಿಂದ ವಿಮುಖರಾಗುತ್ತಿರುವುದು ಕಳವಳಕಾರಿ ಸಂಗತಿ. ಮತದಾನ ಎಂಬುದು ಅಖಂಡ ಪ್ರಜಾ ಸಮೂಹದ ದನಿ. ಪ್ರತಿ ಪ್ರಜೆಯೂ ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆ ಮಾಡಲು ಇರುವ ವ್ಯವಸ್ಥೆಯೇ ಮತದಾನ. ಪ್ರಜಾತಂತ್ರ ದೇಶದ ಪ್ರಜೆಗಳ ಪ್ರಮುಖ ಹಕ್ಕು ಕೂಡ ಹೌದು. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳುಹಿಸಲು ಮತದಾನ ಎಂಬ ಪ್ರಕ್ರಿಯೆಯಾಗಿದೆ. ದೇಶಕ್ಕೆ ಒಳಿತು ಮಾಡುವ ನಾಯಕನನ್ನು ಚುನಾಯಿಸುವುದು ಪ್ರಜೆಗಳ ಜವಾಬ್ದಾರಿ.

    ಗ್ರಾಮೀಣ ಪ್ರದೇಶಗಳಿಂತ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಆಗುತ್ತದೆ. ವಿದ್ಯಾವಂತರೇ ಹೆಚ್ಚಿರುವ ನಗರ ಪ್ರದೇಶದಲ್ಲಿ ಮತದಾನವನ್ನು ಕಡೆಗಣಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ. ಜನರು ಹೆಚ್ಚು ವಿದ್ಯಾವಂತರಾದಂತೆ ಮತದಾನದ ಕಡೆ ನಿರ್ಲಕ್ಷ್ಯ ತೋರುತ್ತಿರುವುದು ಬೇಸರದ ಸಂಗತಿ.

    ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ರಾಜಕೀಯ ನಾಯಕರ ಅಬ್ಬರದ ಪ್ರಚಾರ, ಮತ ಬೇಟೆಗೆ ಕಾರ್ಯತಂತ್ರಗಳು ಬಿರುಸಿನಿಂದ ನಡೆದಿವೆ. ಈ ಮಧ್ಯೆ ನಾನಾ ರೀತಿಯ ಆಮಿಷಗಳನ್ನು ಒಡ್ಡುವ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನಗಳು ನಡೆಯುವ ಸಾಧ್ಯತೆ ಇದೆ. ಆದರೆ ಚುನಾವಣಾ ಆಯೋಗವು ಅಕ್ರಮಗಳ ಬಗ್ಗೆ ಹದ್ದಿನ ಕಣ್ಣಿಟ್ಟಿದೆ. ಹೀಗಿದ್ದರೂ ರಂಗೋಲಿ ಕೆಳಗೆ ನುಸುಳಲು ಕೆಲವರು ಕಾರ್ಯತಂತ್ರ ರೂಪಿಸಬಹುದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts