More

    ಮತದಾನ ರಾಷ್ಟ್ರದ ಪ್ರಜೆಗಳಿಗೆ ಸಿಕ್ಕ ವರದಾನ

    ಕುಕನೂರು: ಆಸೆ ಆಮಿಷಗಳಿಗೆ ಒಳಗಾಗದೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ಪಿಡಿಒ ಅಡಿವೆಪ್ಪ ಯಡಿಯಾಪುರ ಹೇಳಿದರು.

    ಇದನ್ನೂ ಓದಿ: ಮನೆಮತದಾನದ ಮೂಲಕ ಹಕ್ಕು ಚಲಾಯಿಸಿದ 143 ಜನ

    ತಾಲೂಕಿನ ಯರೇಹಂಚಿನಾಳ ಗ್ರಾಪಂ ವ್ಯಾಪ್ತಿಯ ಸಿದ್ನೇಕೊಪ್ಪ ಗ್ರಾಮದಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ‘ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ಮತ್ತು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.

    ಮತದಾನ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಜೆಗಳಿಗೆ ಸಿಕ್ಕ ವರದಾನ. ಸಂವಿಧಾನ ನಮ್ಮೆಲ್ಲರಿಗೂ ನೀಡಿರುವ ಹಕ್ಕು. ಅದನ್ನು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಅರ್ಹ ಅಭ್ಯರ್ಥಿಗೆ ಚಲಾಯಿಸಬೇಕು.

    80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಹಾಯವಾಗಲಿ ಎಂದು ಚುನಾವಣಾ ಆಯೋಗ ನೋಂದಾಯಿತ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಹೋಗಿ ಮತ ಪಡೆಯಲಾಗುತ್ತದೆ. ಅದರಂತೆ ಚುನಾವಣೆ ದಿನ ಸಾರ್ವತ್ರಿಕ ರಜೆ ಇರುತ್ತದೆ.

    ಅಂದು ಸರ್ಕಾರಿ, ಅರೆ ಸರ್ಕಾರಿ ನೌಕರರು ಹಾಗೂ ನರೇಗಾ ಕೂಲಿಕಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು. ನರೇಗಾ ಯೋಜನೆಯಡಿ ಪ್ರಸಕ್ತ ವರ್ಷದಿಂದ ಕೂಲಿ ಮೊತ್ತ 349 ರೂ. ಹೆಚ್ಚಳವಾಗಿದ್ದು, ಸದುಪಯೋಗ ಪಡೆಯಿರಿ ಎಂದರು. ತಾಲೂಕು ಐಇಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಪ್ರತಿಜ್ಞಾ ವಿಧಿ ಬೋಧಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts