More

    ಪ್ರಜಾಪ್ರಭುತ್ವ ರಕ್ಷಣೆಗೆ ಕಡ್ಡಾಯ ಮತದಾನ ಮಾಡಬೇಕು

    ಚಿಕ್ಕಮಗಳೂರು: ದೇಶ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮತ್ತು ರಾಜ್ಯದಲ್ಲಿ ಅತಿ ಹೆಚ್ಚು ಮತದಾನ ಮಾಡಬೇಕು ಎಂಬ ಗುರಿ ಹೊಂದಲಾಗಿದೆ ಎಂದು ನಗರಸಭೆ ಆಯುಕ್ತ ಕೃಷ್ಣಮೂರ್ತಿ ತಿಳಿಸಿದರು.

    ನಗರದಲ್ಲಿ ಮಂಗಳವಾರ ಮತದಾನದ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದ ಕೆಲವು ವಾರ್ಡ್ಗಳಲ್ಲಿ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿತ್ತು. ಹೀಗಾಗಿ ಮತದಾರರಲ್ಲಿ ಜಾಗೃತಿ ಮೂಡಿಸಲು ನಗರದ ವಿಜಯಪುರ, ಗೌರಿಕಾಲುವೆ ಹಾಗೂ ಇನ್ನೂ ಕೆಲವು ವಾರ್ಡ್ಗಳಲ್ಲಿ ಮತದಾನ ಜಾಗೃತಿ ಜಾಥವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
    ನಗರಸಭೆಯಿಂದ ಮನೆ-ಮನೆ ಕಸ ಸಂಗ್ರಹಣೆ ಗಾಡಿಗಳಿಂದ ಮತ್ತು ಟ್ರಾÈಕ್ಟರ್‌ಗಳನ್ನು ಒಳಗೊಂಡAತೆ ಒಂದು ಬೃಹತ್ ಮಟ್ಟದ ಜಾಗೃತಿ ಜಾಥ ಏರ್ಪಡಿಸಲಾಗುವುದು. ಏ. ೨೦ರಂದು ನಗರಸಭೆಯಿಂದ ನಗರದ ಎಂ.ಜಿ ರಸ್ತೆಯಲ್ಲಿ ವಿನೂತನ ವಿವಿಧ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
    ಏ. ೨೬ರಂದು ನಡೆಯಲಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ಸಂವಿಧಾನ ಬದ್ಧವಾದ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದರು.
    ಈ ಸಂದರ್ಭದಲ್ಲಿ ನಗರಸಭೆ ಅಧಿಕಾರಿಗಳಾದ ರವಿ, ತೇಜಸ್ವಿ, ವೆಂಕಟೇಶ್, ರಂಗಪ್ಪ, ಶಶಿರಾಜ್ ಅರಸ್, ಚಂದ್ರಶೇಖರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts