ಇಂಡಿ:ಮತದಾನ ಪ್ರತಿ ನಾಗರಿಕರ ಕರ್ತವ್ಯವಾಗಬೇಕು. ದೇಶದ ಅಭಿವೃದ್ಧಿಗಾಗಿ ಉತ್ತಮರನ್ನು ಆಯ್ಕೆ ಮಾಡಲು ನಮ್ಮ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದು ದಿವಾಣಿ ನ್ಯಾಯಾಧೀಶ ಸುನೀಲಕುಮಾರ ಎಂ.ಎಸ್. ಹೇಳಿದರು.
ತಾಲೂಕು ಆಡಳಿತ, ಕಾನೂನು ಸೇವಾ ಪ್ರಾಧಿಕಾರ ಆಶ್ರಯದಲ್ಲಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಸಿಬ್ಬಂದಿ ಸೇರಿ ಹಲವರು ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡದೆ, ರಜಾ ದಿನವನ್ನು ತಮ್ಮ ವೈಯಕ್ತಿಕ ಕೆಲಸಕ್ಕೆ ಬಳಸಿಕೊಳ್ಳುತ್ತಾರೆ. ಇದು ಸರಿಯಾದ ಕ್ರಮವಲ್ಲ.ಸಂವಿಧಾನ ನಮಗೆ ನೀಡಿದ ಹಕ್ಕನ್ನು ಚಲಾಯಿಸಬೇಕು ಎಂದರು.
ಅತ್ಯುತ್ತಮ ಕಾರ್ಯ ನಿರ್ವಹಿಸಿದ ಬಿಎಲ್ಒ ಗಳನ್ನು ಸನ್ಮಾನಿಸಿ, ಪ್ರಮಾಣ ಪತ್ರ ನೀಡಲಾಯಿತು.
ಮತದಾನ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ, ಚಿತ್ರಕಲೆ, ರಸಪ್ರಶ್ನೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ವಕೀಲರ ಸಂದ ಕಾರ್ಯದರ್ಶಿ ಎನ್.ಕೆ. ನಾಡಪುರೋಹಿತ, ಕಂದಾಯ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ, ತಹಸೀಲ್ದಾರ್ ಬಿ.ಎಸ್. ಕಡಭಾವಿ, ತಾ.ಪಂ ಇಒ ನಂದೀಪ ರಾಠೋಡ, ಜಿ.ಪಂ ಸಾಹಯಕ ನಿರ್ದೇಶಕ ಎಸ್.ಆರ್. ರುದ್ರವಾಡಿ ಇದ್ದರು.