

ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ಜ.12ರಂದು ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ವೃಷಭ್ ಶೆಣೈ ಗಂಗೊಳ್ಳಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಗಂಗೊಳ್ಳಿಯ ಉದ್ಯಮಿ ಜಿ.ವಿಠಲ ಭಾಸ್ಕರ ಶೆಣೈ, ವೈಷ್ಣವಿ ಶೆಣೈ ದಂಪತಿ ಪುತ್ರ.