More

  ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಡಾ. ವಿಜಯ ಸಂಕೇಶ್ವರ

  ಹುಬ್ಬಳ್ಳಿ: ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರು ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠಳ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

  ಹುಬ್ಬಳ್ಳಿಯ ಬಿಡನಾಳದಲ್ಲಿರುವ ಮನೆಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿದ ವಿಜಯ ಸಂಕೇಶ್ವರ ಅವರು ನೇಹಾಳ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

  Vijaya Sankeshwara

  ಇಬ್ಬರ ಬಂಧನ
  ಹುಬ್ಬಳ್ಳಿ-ಧಾರತವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಸಂಚಲನ ಸೃಷ್ಟಿಸಿದ್ದು, ಪ್ರಕರಣ ಕ್ಷಣಕ್ಕೊಂದು ಬಣ್ಣ ಪಡೆಯುತ್ತಿದೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನೇಹಾ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟಿಸ್​ ಫಾರ್​ ಲವ್​ ಎಂಬ ಅಭಿಯಾನ ಶುರುವಾಗಿದ್ದು, ಇದರಲ್ಲಿ ನೇಹಾ ಹಾಗೂ ಫಯಾಜ್​ ಜೊತೆಗಿರುವ ಫೋಟೋಗಳನ್ನು ಹಾಕಿಕೊಳ್ಳುವ ಮೂಲಕ ಹತ್ಯೆಯನ್ನು ಸಮರ್ಥಿಸಿ ಪೋಸ್ಟ್​ ಹಾಕಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನೇಹಾ ಹಾಘೂ ಫಯಾಜ್​ ಫೋಟೋ ವೈರಲ್​ ಮಾಡಿದ ಸಂಬಂಧ ಪೊಲೀಸರು ಧಾರವಾಡ ನಿವಾಸಿಗಳಾದ ಸಾದಿಕ್​ ತಡಕೋಡ ಹಾಗೂ ಆದಿಲ್​ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಇದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿ ದೂರು ದಾಖಲಿಸಿದ್ದಾರೆ.

  ಪ್ರಕರಣದ ಹಿನ್ನೆಲೆ?
  ಏಪ್ರಿಲ್​ 18ರಂದು ಸಂಜೆ 4:45ರ ಸುಮಾರಿಗೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಒಳಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿದ್ದ ವ್ಯಕ್ತಿ (ಫಯಾಜ್​), ಎಂಸಿಎ ವಿದ್ಯಾರ್ಥಿನಿ (ನೇಹಾ ಹಿರೇಮಠ್) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಚಿಕಿತ್ಸೆ ಫಲಕಾರಿಗಾದೆ ಮೃತಪಟ್ಟಿದ್ದಾಳೆ. ಈ ಪ್ರಕರಣ ರಾಷ್ಟ್ರವ್ಯಾಪಿ ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫಯಾಜ್​ ಹಾಗೂ ನೇಹಾ ಜೊತೆಗಿರುವ ಫೋಟೋಗಳನ್ನು ಹರಿಬಿಡುವ ಮೂಲಕ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​ ನೀಡಲಾಗಿತ್ತು.

  ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ನೇಹಾ ಕೊಲೆ​; ಇನ್ನಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು

  See also  ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts