25.9 C
Bengaluru
Wednesday, January 22, 2020

ವಿವಿ ಪರೀಕ್ಷಾ ಕರ್ತವ್ಯ ಬಹಿಷ್ಕಾರ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

<<ಒಪ್ಪಂದದಂತೆ ಏ.16ರಂದು ಕರ್ತವ್ಯದಿಂದ ಮುಕ್ತ ಗೌರವಧನ ಇಲ್ಲದೆ ಕೆಲಸ ನಿರಾಕರಿಸಿದ ಅತಿಥಿ ಉಪನ್ಯಾಸಕರು * ಫಲಿತಾಂಶ, ಕಾಲೇಜು ಮರು ಆರಂಭದ ಮೇಲೆ ಪರಿಣಾಮ ಸಾಧ್ಯತೆ>>

– ಭರತ್ ಶೆಟ್ಟಿಗಾರ್ ಮಂಗಳೂರು
ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಕರೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಏ.25ರಿಂದ ಆರಂಭವಾಗಿರುವ ಮಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಯ ಕರ್ತವ್ಯವನ್ನು ಬಹಿಷ್ಕರಿಸಿದೆ. ಕೆಲವೊಂದು ಉಪನ್ಯಾಸಕರು ಹೊರತು ಪಡಿಸಿ ಹೆಚ್ಚಿನವರು ಪರೀಕ್ಷಾ ಕರ್ತವ್ಯದಿಂದ ವಿಮುಖರಾಗಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ವಿಶ್ವವಿದ್ಯಾಲಯ ನಿಗದಿಪಡಿಸಿದ ಕೊನೆಯ ಕರ್ತವ್ಯ ದಿನಾಂಕ ಏ.16 ಆಗಿದ್ದು, ಅಂದು ಪ್ರಸಕ್ತ ಸಾಲಿನ ಉಪನ್ಯಾಸಕ ಕೆಲಸದಿಂದ ಅತಿಥಿ ಉಪನ್ಯಾಸಕರನ್ನು ಮುಕ್ತಗೊಳಿಸಲಾಗಿದೆ. ನಂತರದ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದರೂ ಯಾವುದೇ ಗೌರವಧನ ದೊರೆಯುವುದಿಲ್ಲ. ಆದ್ದರಿಂದ ಕೆಲಸ ಮಾಡದಿರಲು ನಿರ್ಧರಿಸಿದ್ದಾರೆ.

 ಕಾಲೇಜುಗಳಲ್ಲಿ ಸಮಸ್ಯೆ: ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾಯಂ ಉಪನ್ಯಾಸಕರ ಸಂಖ್ಯೆ ಕಡಿಮೆ ಇರುತ್ತದೆ. ಪ್ರಸ್ತುತ ವಿವಿ ಪರೀಕ್ಷೆ ನಡೆಯುತ್ತಿರುವುದರಿಂದ ಕೊಠಡಿ ಮೇಲ್ವಿಚಾರಕರ ಕೊರತೆ ಉಂಟಾಗಿದೆ. ಒಂದೆಡೆ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ವಿದ್ಯಾರ್ಥಿಗಳ ದಾಖಲಾತಿ ನಡೆಯುತ್ತಿದೆ. ಕಾಲೇಜು ಪ್ರಾಂಶುಪಾಲರು ದಾಖಲಾತಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ಇರುವ ಬೆರಳೆಣಿಕೆ ಸಂಖ್ಯೆಯ ಕಾಯಂ ಉಪನ್ಯಾಸಕರೇ ಪರೀಕ್ಷೆ ನಡೆಸಬೇಕಾಗಿದೆ.

ಕಾಯಂ ಉಪನ್ಯಾಸಕರ ಮೇಲೆ ಒತ್ತಡ: ಅತಿಥಿ ಉಪನ್ಯಾಸಕರ ಈ ನಿಲುವು ಕಾಯಂ ಉಪನ್ಯಾಸಕರ ಒತ್ತಡ ಹೆಚ್ಚಿಸಿದೆ. ಶಿಕ್ಷಣ ಇಲಾಖೆಯ ನಿಯಮಾವಳಿಯಂತೆ ಪರೀಕ್ಷಾ ಕರ್ತವ್ಯದಲ್ಲಿ ಭಾಗವಹಿಸದವರಿಗೆ ಮೌಲ್ಯಮಾಪನ ಕೆಲಸ ಮಾಡಲೂ ಅವಕಾಶವಿಲ್ಲ. ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸದಿದ್ದರೆ, ಎಲ್ಲ ಕೆಲಸವನ್ನು ಕಾಯಂ ಉಪನ್ಯಾಸಕರೇ ಮಾಡಬೇಕಾಗುತ್ತದೆ. ಇದರಿಂದ ರಜೆಯೂ ಕಡಿಮೆಯಾಗಿ ಕಾಯಂ ಉಪನ್ಯಾಸಕರ ಮೇಲೆ ಒತ್ತಡ ಹೆಚ್ಚಲಿದೆ. ಇದು ಫಲಿತಾಂಶ ಮತ್ತು ಕಾಲೇಜು ಮರು ಆರಂಭದ ಮೇಲೆಯೂ ಪರಿಣಾಮ ಬೀರಬಹುದು ಎನ್ನುತ್ತಾರೆ ಕಾಲೇಜು ಪ್ರಾಂಶುಪಾಲರು.

ಅತಿಥಿ ಉಪನ್ಯಾಸಕರು ಹತ್ತು ತಿಂಗಳ ಕೆಲಸದ ಅವಧಿ ಮುಗಿದು, ಕೆಲಸದಿಂದ ಮುಕ್ತಗೊಂಡಿದ್ದಾರೆ. ಆದ್ದರಿಂದ ಪ್ರಸ್ತುತ ಪರೀಕ್ಷಾ ಕರ್ತವ್ಯಕ್ಕೆ ಉಪನ್ಯಾಸಕರ ಕೊರತೆಯಾಗಿದೆ. ಒಂದು ಕಡೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿಯೂ ನಡೆಯುತ್ತಿದ್ದು, ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚಿನ ಸಮಸ್ಯೆಯಾಗಿದೆ. ಕಾಯಂ ಉಪನ್ಯಾಸಕರಿಗೆ ರಜೆಯೂ ಕಡಿಮೆಯಾಗುವ ಸಾಧ್ಯತೆಯಿದೆ.
– ರಾಜಶೇಖರ್ ಹೆಬ್ಬಾರ್, ಮಂಗಳೂರು ವಿವಿ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ

ವಿವಿ ಸರಿಯಾದ ಸಮಯದಲ್ಲಿ ಕಾಲೇಜು ಮರು ಆರಂಭಿಸಬೇಕಿದ್ದರೆ ಅತಿಥಿ ಉಪನ್ಯಾಸಕರು ಪರೀಕ್ಷಾ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮೌಲ್ಯಮಾಪನ ತಡವಾಗಲಿದೆ. ಇದು ಮುಂದಕ್ಕೆ ಫಲಿತಾಂಶ ಪ್ರಕಟಗೊಳಿಸಲೂ ಸಮಸ್ಯೆಯಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದ ಕಾಲೇಜು ಆರಂಭವೂ ಇದರಿಂದ ತಡವಾಗಲಿದೆ. ಈ ಹೋರಾಟ ಯಾವುದೇ ಕಾಲೇಜಿನ ಪ್ರಾಂಶುಪಾಲರ ವಿರುದ್ಧವಲ್ಲ ಬದಲಿಗೆ ಕಾಲೇಜು ಶಿಕ್ಷಣ ಇಲಾಖೆ ವಿರುದ್ಧ.
– ಧೀರಜ್ ಕುಮಾರ್, ಜಿಲ್ಲಾಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ

ಅತಿಥಿ ಉಪನ್ಯಾಸಕರನ್ನು ಒಪ್ಪಂದದಂತೆ ಏ.16ರಂದೇ ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ. ಆದ್ದರಿಂದ ಹೆಚ್ಚಿನವರು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಂಡಿಲ್ಲ. ಇದೇ ಮೊದಲ ಬಾರಿಗೆ ಇಂತಹ ಸಮಸ್ಯೆ ಉಂಟಾಗಿದೆ. ಇಲಾಖೆಯಿಂದ ಯಾವುದೇ ಗೌರವಧನ ನೀಡಲು ಅವಕಾಶವಿಲ್ಲ.
– ಡಾ.ಅಪ್ಪಾಜಿ ಗೌಡ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...