More

    ವಿವಿಎಸ್ ಲಕ್ಷ್ಮಣ್ ಭಾರತೀಯ ಕ್ರಿಕೆಟ್ ಮುಖ್ಯ ಕೋಚ್?

    ನವದೆಹಲಿ: ಭಾರತ ಕ್ರಿಕೆಟ್‌ನ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದ ಮುಗಿದಿದ್ದು, ವಿವಿಎಸ್ ಲಕ್ಷ್ಮಣ್ ಹೊಸ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

    ಇದನ್ನೂ ಓದಿ: ಭಾರತ ಎ ಮಹಿಳಾ ತಂಡದಲ್ಲಿ ನಾಲ್ವರು ಕನ್ನಡತಿಯರಿಗೆ ಸ್ಥಾನ
    ಎರಡು ವರ್ಷದಿಂದ ಭಾರತೀಯ ಕ್ರಿಕೆಟ್‌ಗೆ ಮುಖ್ಯಕೋಚ್ ಆಗಿ ಸೇವೆ ಸಲ್ಲಿಸಿದ ಶ್ರೀಡಿಪೆಂಡಬಲ್ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಂಡಿದೆ. ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತದ ಸೋಲಿನೊಂದಿಗೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯೂ ಮುಗಿದಿದ್ದು, ದ್ರಾವಿಡ್ ತಂಡದ ಸದಸ್ಯರಾಗಿ ವಿಕ್ರಮ್ ರಾಥೋಡ್(ಬ್ಯಾಟಿಂಗ್ ಕೋಚ್), ಪಾರಸ್ ಮಾಂಬ್ರೆ(ಬೌಲಿಂಗ್ ಕೋಚ್) ಮತ್ತು ಟಿ.ದಿಲೀಪ್(ಫೀಲ್ಡಿಂಗ್ ಕೋಚ್) ಆಗಿ ಸೇವೆ ಸಲ್ಲಿಸಿದ್ದಾರೆ.

    ದ್ರಾವಿಡ್ ನಿರಾಸಕ್ತಿ!
    2021 ರಲ್ಲಿ ರವಿಶಾಸ್ತ್ರಿ ಅವರಿಂದ ಭಾರತ ತಂಡದ ಮುಖ್ಯಕೋಚ್ ಆಗಿ ಅಧಿಕಾರ ವಹಿಸಿಕೊಂಡ ದ್ರಾವಿಡ್ ತಂಡದ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಸೇರಿ ತಂಡವನ್ನೇನೋ ಮುಂದುವರಿಸಿದರು. ಆದರೆ ಈ ಜೋಡಿ ಕನಿಷ್ಟ ಒಂದು ಐಸಿಸಿ ಟ್ರೋಫಿಯನ್ನು ನೀಡಲು ಸಾಧ್ಯವಾಗಲಿಲ್ಲ. ಭಾರತವು ಐಸಿಸಿ ಟೆಸ್ಟ್ ಲೀಗ್‌ ಮತ್ತು ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಸ್ಥಾನದೊಂದಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. 2023 ರ ಏಷ್ಯಾ ಕಪ್ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಯಿತು. 2022ರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಹೋರಾಟ ಸೆಮಿಸ್‌ನಲ್ಲಿ ಅಂತ್ಯಗೊಂಡಿತ್ತು.

    ಇನ್ನು ವಿಶ್ವಕಪ್‌ ಗೆಲ್ಲಲಿಲ್ಲ ಎಂಬ ಕಾರಣಕ್ಕೆ ದ್ರಾವಿಡ್​ ತಂಡವನ್ನು ಸರಿಯಾಗಿ ಸಜ್ಜುಗೊಳಿಸಲಿಲ್ಲ ಎಂದೇನು ಅಲ್ಲ. ಮುಖ್ಯಕೋಚ್ ಆಗಿ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ ಭಾರತವನ್ನು ನಂಬರ್ ಒನ್ ತಂಡವನ್ನಾಗಿ ಮಾಡಿದ ಕೀರ್ತಿ ದ್ರಾವಿಡ್‌ಗೆ ಸಲ್ಲುತ್ತದೆ.
    ಮುಖ್ಯಕೋಚ್​ಗೆ ಬಿಸಿಸಿಐ ವರ್ಷಕ್ಕೆ 12 ಕೋಟಿ ರೂ.ಪಾವತಿಸುತ್ತಿದೆ. ದ್ರಾವಿಡ್ ಒಪ್ಪಂದವು ನ.19ಕ್ಕೆ ಕೊನೆಗೊಂಡಿದ್ದು, ಮುಖ್ಯ ಕೋಚ್ ಆಗಿ ಮುಂದುವರಿಯುವ ಉದ್ದೇಶ ಅವರು ಹೊಂದಿಲ್ಲ. ಹೀಗಾಗಿ ಹೊಸ ಕೋಚ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ.

    ದ್ರಾವಿಡ್ ಉತ್ತರಾಧಿಕಾರಿಯಾಗಿ ವಿ.ವಿ.ಎಸ್:
    ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ನಿರ್ದೇಶಕರಾಗಿರುವ ಆಂಧ್ರದ ವಿವಿಎಸ್ ಲಕ್ಷ್ಮಣ್ ಅವರು ದ್ರಾವಿಡ್ ಅವರ ಅಧಿಕಾರಾವಧಿ ಮುಗಿದ ನಂತರ ಅನಧಿಕೃತವಾಗಿ ಮುಖ್ಯ ಕೋಚ್ ಹುದ್ದೆಯನ್ನು ವಹಿಸಿಕೊಂಡಿದ್ದಾರೆ. ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅವರು ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ಭಾರತ 2 ವಿಕೆಟ್‌ಗಳ ಜಯದೊಂದಿಗೆ ಶುಭಾರಂಭ ಮಾಡಿದೆ. ಈ ಹಿಂದೆ ದ್ರಾವಿಡ್ ಲಭ್ಯವಿಲ್ಲದಿದ್ದಾಗಲೂ ವಿವಿಎಸ್ ಲಕ್ಷ್ಮಣ್ ಅನೇಕ ಸರಣಿಗಳಲ್ಲಿ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.
    ಇದೀಗ ದ್ರಾವಿಡ್ ಅಧಿಕಾರಾವಧಿ ಕೊನೆಗೊಂಡಿದ್ದು, ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಹುದ್ದೆ ಅಲಂಕರಿಸುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿರುವ ವಿವಿಎಸ್ ಲಕ್ಷ್ಮಣ್ ಅವರೇ ಮುಖ್ಯ ಕೋಚ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ ಎಂದು ಕ್ರಿಕೆಟ್ ಪಂಡಿತರು ಹೇಳುತ್ತಾರೆ. ಲಕ್ಷ್ಮಣ್ ಡಿ.10 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಮುಖ್ಯ ಕೋಚ್ ಆಗಿ ಮುನ್ನಡೆಸಲಿದ್ದಾರೆ ಎನ್ನಲಾಗುತ್ತಿದೆ.

    ವಿಶ್ವಕಪ್ ಫೈನಲ್​​ ಹಿಂದಿತ್ತಾ ಬಿಜೆಪಿಯ ಮಾಸ್ಟರ್ ಪ್ಲ್ಯಾನ್​? ಮೋದಿ ಸ್ಕ್ರಿಪ್ಟ್​ ತಪ್ಪಾಗಿದೆ ಎಂದ ಪ್ರಕಾಶ್​ ರಾಜ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts