21.7 C
Bengaluru
Tuesday, January 21, 2020

ಮಂಡ್ಯ ರೈತನ ಕಾರ್ಯಕ್ಕೆ ಮೆಚ್ಚಿ ವಿವಿಎಸ್​ ಲಕ್ಷಣ್​ ಹೇಳಿದ್ದೇನು?

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ನವದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ ವಿವಿಎಸ್​ ಲಕ್ಷ್ಮಣ್ ಅವರು​ ಇತರರಿಗಿಂತ ಸ್ವಲ್ಪ ವಿಭಿನ್ನ. ಟ್ವಿಟರ್​ನಲ್ಲಿ ಸದಾ ಸಕ್ರಿಯರಾಗಿರುವ ಅವರು ಸಾಮಾಜಿಕ ಕಾರ್ಯದಲ್ಲಿ ತೊಡಗಿದವರನ್ನು ಗುರುತಿಸಿ ಅವರ ಬೆನ್ನುತಟ್ಟುವ ಕೆಲಸವನ್ನು ಮಾಡುತ್ತಿರುತ್ತಾರೆ. ಇದೀಗ ಕನ್ನಡಿಗರೊಬ್ಬರ ಕಾರ್ಯಕ್ಕೆ ತಲೆಬಾಗಿ ನಮಸ್ಕರಿಸಿದ್ದಾರೆ.

ಹೌದು, ಲಕ್ಷಣ್​ ಅವರು ಮಂಡ್ಯದ ರೈತ ಕಾಮೇಗೌಡರ ಕಾರ್ಯಕ್ಕೆ ಫಿದಾ ಆಗಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದು, 82 ವರ್ಷದ ಕಾಮೇಗೌಡ ಅವರು ಸುಮಾರು 14 ಕೆರೆಗಳನ್ನು ನಿರ್ಮಿಸಿ, ಬೇಸಿಗೆಯಲ್ಲೂ ಅದರಲ್ಲಿ ನೀರು ಉಳಿಯುವ ಹಾಗೇ ನೋಡಿಕೊಳ್ಳುತ್ತಿದ್ದಾರೆ. ಸುಮಾರು 15 ಲಕ್ಷ ರೂ. ಖರ್ಚು ಮಾಡಿ ಕೆರೆಗಳ ನಿರ್ವಹಣೆ ಮಾಡುತ್ತಿದ್ದಾರೆ. ಪ್ರಶಸ್ತಿಗಳಿಂದ ಬಂದ ಮೊತ್ತವನ್ನು ಕೆರೆಗಳ ಅಭಿವೃದ್ಧಿಗೆ ಬಳಸುತ್ತಿರುವ ಅವರಿಗೆ ಪ್ರಣಾಮಗಳು ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ಅಂದಹಾಗೆ ಕಾಮೇಗೌಡ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ನಿಸರ್ಗ ಪ್ರೇಮಿ. ಕುರಿಗಾಯಿ ಆಗಿರುವ ಅವರು ಬೆಟ್ಟದ ಬುಡದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಿದ ಹೆಗ್ಗಳಿಕೆ ಹೊಂದಿದ್ದು, ಕುರಿ ಮಾರಾಟ ಮಾಡಿ‌‌ ಚೆಕ್ ಡ್ಯಾಂ ನಿರ್ಮಿಸಿ, ಅರಣ್ಯ ಬೆಳೆಸಿದ್ದಾರೆ. ಅಲ್ಲದೆ, ಇವರ ಕಾರ್ಯಕ್ಕೆ ಮೆಚ್ಚಿ ಮುರುಘಾ ಮಠದಿಂದ ನೀಡಲಾಗುವ 2017ನೇ ಸಾಲಿನ ಪ್ರತಿಷ್ಠಿತ ’ಬಸವಶ್ರೀ ಪ್ರಶಸ್ತಿ’ಯನ್ನು ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದ್ದಾರೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...