More

    ಸಹಕಾರ ಬ್ಯಾಂಕುಗಳಲ್ಲಿನ ಸಾಲದ ಮೇಲಿನ ಬಡ್ಡಿ ಮನ್ನಾ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

    ಬೆಳಗಾವಿ: ಸಹಕಾರ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

    ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಮತ್ತೆ ನಾಲ್ಕುದಿನ ಮಳೆ
    ಸುವರ್ವಿಣ ಧಾನ ಸೌಧದಲ್ಲಿ ಶುಕ್ರವಾರ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಮ್ಯಾನಿಫೆಸ್ಟೊದಲ್ಲಿ ಹೇಳಿಲ್ಲ. ಆದರೆ ನಮ್ಮ ಸರ್ಕಾರ ಬಡ್ಡಿ ಮನ್ನಾ ಮಾಡಲು ತೀರ್ಮಾನಿಸಿದೆ ಎಂದು ಹೇಳಿದರು.

    ಇನ್ನು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ. ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲಾಗುವುದು ಎಂದರು.

    ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂ.ಅನುದಾನ ಒದಗಿಸಿದೆ. ಸುಮಾರು 42000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ನಂಜುಂಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೆಷ ಅಭಿವೃದ್ಧಿ ಯೋಜನೆಯಡಿ 32433.43 ಕೋಟಿ ರೂ. ಖರ್ಚು ಮಾಡಲಾಗಿದೆ. ಇದರ ಜತೆಗೆ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ. ಹಾಗಾಗಿ ವಿಶೇಷವಾಗಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತçಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

    ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸಲಾಗುವುದು. ಬೆಳಗಾವಿ ಸಮೀಪ 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು. ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು.

    ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಇದನ್ನು ಹೊರತುಪಡಿಸಿ 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದರು.

    ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಲಾಗುವುದು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು. ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾಯೋಜನೆ ರೂಪಿಸಸಲಾಗುವುದು ಎಂದು ಮುಖ್ಯಮಂತ್ರಿಯವರು ಭರವಸೆ ನೀಡಿದರು.

    ‘ನನಗೆ ಈ ಹಾಡು ಬೇಡ’: ಪಾಕಿಸ್ತಾನಿ ಗಾಯಕನಿಗೆ ಕ್ಷಮೆ ಕೇಳಿದ ಸೋನು ನಿಗಮ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts