ವಕ್ಫ್​ ನೊಟೀಸ್​, ಪಹಣಿ ತಿದ್ದುಪಡಿ ಮಾಹಿತಿ ನೀಡಲು ಮನವಿ

udp-yashpal suvarna
Published on

ಉಡುಪಿ: ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್​ ಬೋರ್ಡ್​ ನೋಟೀಸ್​ ನೀಡಿ ಗೊಂದಲ ಸೃಷ್ಟಿಸಿದ್ದು, ಹಲವರ ಪಹಣಿಯಲ್ಲಿ ತಿದ್ದುಪಡಿ ಮಾಡಿರುವುದು ಬೆಳಕಿಗೆ ಬಂದಿದೆ. ಉಡುಪಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಸಮಸ್ಯೆ ಉಂಟಾಗಿದ್ದರೆ ತಕ್ಷಣ ಶಾಸಕರ ಕಚೇರಿಗೆ ಮಾಹಿತಿ ನೀಡುವಂತೆ ಉಡುಪಿ ಶಾಸಕ ಯಶ್​ ಪಾಲ್​ ಸುವರ್ಣ ತಿಳಿಸಿದ್ದಾರೆ.

ವಕ್ಫ್​ ಬೋರ್ಡ್​ ಅವೈಜ್ಞಾನಿಕ ಕಾನೂನುಬಾಹಿರವಾಗಿ ನೋಟೀಸ್​ ನೀಡಿ ಸಮಸ್ಯೆ ಸೃಷಿಸಿದೆ. ಸರ್ಕಾರ ತಕ್ಷಣ ಎಲ್ಲಾ ನೋಟೀಸ್​ಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಜಾತ್ರೆ ವ್ಯಾಪಾರಿಗಳಿಗೆ ಅನುಮತಿ ಅಗತ್ಯ

ಮುಂಬರುವ ದಿನಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ವಿವಿಧ ದೇವಸ್ಥಾನಗಳ ಜಾತ್ರೆ ಉತ್ಸವ ಆರಂಭಗೊಳ್ಳಲಿದ್ದು, ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ಜಾತ್ರೆಯಲ್ಲಿ ವ್ಯಾಪಾರ ಮಾಡುವ ವ್ಯಕ್ತಿಗಳು ಸಂಬಂಧಿತ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ದೇವಸ್ಥಾನದ ಆಡಳಿತ ಸಮಿತಿಯ ಅನುಮತಿಯನ್ನು ಕಡ್ಡಾಯವಾಗಿ ಪಡೆಯುವಂತೆ ಸ್ಥಳಿಯಾಡಳಿತ ಸಂಸ್ಥೆಗಳು ನಿಯಮ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net