More

    ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯ: ಕದಂಬ ಸೈನ್ಯ ಕಾರ್ಯಕರ್ತರಿಂದ ಪಾದಯಾತ್ರೆ

    ಮಂಡ್ಯ: ಕಾವೇರಿ ಸಂಕಷ್ಟ ಸೂತ್ರ ಹಾಗೂ ರಾಷ್ಟ್ರೀಯ ವೈಜ್ಞಾನಿಕ ಜಲ ನೀತಿ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಲು ಮುಂದಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಕದಂಬ ಸೈನ್ಯ ಕಾರ್ಯಕರ್ತರು ಕಾವೇರಿ ಯಾತ್ರೆ ಮೂಲಕ ತಲಕಾವೇರಿಗೆ ಹೊರಟರು.
    ನಗರದ ಕಾವೇರಿ ಉದ್ಯಾನದ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಸಂಕಷ್ಟಕಾಲದಲ್ಲಿ ರಾಜಕೀಯ ಪಕ್ಷಗಳು ಕೈ ಬಿಟ್ಟಿರುವ ಕನ್ನಡಿಗರನ್ನು ಕಾಪಾಡು ತಾಯಿ ಎಂದು ಪ್ರಾರ್ಥಿಸಿದರು. ಬಳಿಕ ಸರ್‌ಎಂವಿ ಪ್ರತಿಮೆ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ತೆರಳಿ ಬೆಂಬಲ ಸೂಚಿಸಿದರು.
    ರಾಜ್ಯಸರ್ಕಾರ ರೈತರ ಹಿತ ಬಲಿ ಕೊಟ್ಟು ತಮಿಳುನಾಡಿಗೆ ನೀರು ಬಿಡುತ್ತಿದೆ. ಕಾವೇರಿ ವಿಚಾರದಲ್ಲಿ ರಾಜಕಾರಣಿಗಳು ಇಚ್ಛಾಸಕ್ತಿ ಪ್ರದರ್ಶಿಸಬೇಕು. ನೀರು ಬಿಡಲು ಆದೇಶ ಮಾಡುವ ಪ್ರಾಧಿಕಾರ ಹಾಗೂ ಸಮಿತಿ ಕಾವೇರಿ ಜಲಾನಯನ ಪ್ರದೇಶಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಅರಿಯಬೇಕು. ಸಂಕಷ್ಟ ಸೂತ್ರ ರಚನೆಗೆ ಕೇಂದ್ರದ ಮೇಲೆ ಒತ್ತಡ ಹಾಕಬೇಕು. ಜಲವಿವಾದ ವಿಚಾರದಲ್ಲಿ ರಾಜ್ಯಗಳು ಬದ್ಧತೆ ತೋರಬೇಕು. ಆಳುವ ಸರ್ಕಾರ, ವಿರೋಧ ಪಕ್ಷ ಹಾಗೂ ಸಂಸದರು ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಕಾರ್ಯಕರ್ತರು ಮೈಸೂರಿಗೆ ತೆರಳಿದರು.
    ಸೈನ್ಯದ ರಾಜ್ಯಾಧ್ಯಕ್ಷ ಬೇಕರಿ ರಮೇಶ್, ದೇವನಹಳ್ಳಿ ದೇವರಾಜ್, ಎಸ್.ಶಿವಕುಮಾರ್, ಶಿವಕುಮಾರ ಪಟ್ಲಿ, ಚಿಕ್ಕ ವೆಂಕಟಪ್ಪ, ಉಮ್ಮಡಹಳ್ಳಿ ನಾಗೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts