More

    444 ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್‌ವ್ಯೂ: ಬಿಬಿಎಂಪಿಯಿಂದ ಅರ್ಜಿ ಆಹ್ವಾನ

    ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ತರಬೇಕಿರುವ ಆರೋಗ್ಯ ವಲಯದ ಪ್ರಮುಖ ಕಾರ್ಯಕ್ರಮಗಳ ಜಾರಿಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲು 444 ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್‌ವ್ಯೆಗೆ ಪಾಲಿಕೆಯುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

    ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (ಎನ್‌ಯುಎಚ್‌ಎಂ), ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ (ಎನ್‌ಟಿಇಪಿ), ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಂಬಾಕು ನಿಯಂತ್ರಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ಅಂಧತ್ವ ನಿರ್ಮೂಲನಾ ಕಾರ್ಯಕ್ರಮದಡಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

    ವಾಕ್ ಇನ್ ಇಂಟರ್‌ವ್ಯೆ ಪಾಲಿಕೆ ನಿಗದಿ ಪಡಿಸಿರುವ ಸ್ಥಳಗಳಲ್ಲಿ ಈ ತಿಂಗಳ 13ರಿಂದ 15ರ ವರೆಗೆ ಆಯಾ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಆಧರಿಸಿ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.

    ಒಂದು ವರ್ಷದ ಅವಧಿಗೆ ಗುತ್ತಿಗೆ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇತ್ರತಜ್ಞರು, ಮಕ್ಕಳ ತಜ್ಞರು, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಶಿಯನ್ಸ್, ಸ್ಟ್ಾ ನರ್ಸ್ ಹಾಗೂ ಇತರ ಅರೆವೈದ್ಯ ಸಿಬ್ಬಂದಿ ಹುದ್ದೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಎಲ್ಲ ಹುದ್ದೆಗಳಿಗೂ ಒಂದು ವರ್ಷದ ಅವಧಿಗೆ ಮಾತ್ರ ನೇಮಕಾತಿ ಅನ್ವಯವಾಗಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts