

ಕುಂದಾಪುರ: ವಂಡ್ಸೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ ಬುಧವಾರ ನಡೆಯಿತು.
ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಅಧ್ಯಕ್ಷತೆ ವಹಿಸಿದ್ದರು. ಶಾಲೆ ಡಿಜಿಟಲ್ ಮ್ಯಾಗಜಿನ್ ಅನಾವರಣಗೊಳಿಸಲಾಯಿತು. ವಂಡ್ಸೆ ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ್ ಜೋಗಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಗ್ರಾಪಂ ಸದಸ್ಯೆ ಶಶಿಕಲಾ ಎಸ್.ವಂಡ್ಸೆ, ಟ್ರಸ್ಟ್ ಕೋಶಾಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ, ಟ್ರಸ್ಟ್ ಟ್ರಸ್ಟಿ ಆನಂದ ಶೆಟ್ಟಿ ಸಬ್ಲಾಡಿ, ಗ್ರಾಪಂ ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ಹಾಗೂ ಕರ್ಕುಂಜೆ, ಹೊಸಾಡು, ಕೊಲ್ಲೂರು ಸಿ.ಆರ್.ಪಿಗಳು ಉಪಸ್ಥಿತರಿದ್ದರು.
ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ನಾಗರಾಜ್ ಶೆಟ್ಟಿ ಸ್ವಾಗತಿಸಿ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಹಾಗೂ ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್. ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಸದಾಶಿವ ಕೆಂಚನೂರು ವಂದಿಸಿದರು.