

ಚಿಕ್ಕಬಳ್ಳಾಪುರ:
ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ಇಲಾಖೆ ವಿತರಿಸುತ್ತಿದ್ದು ಅರ್ಹರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದೆ. ಇದರಿಂದ ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ನಿಯಮಾನುಸಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆದ್ಯತಾ ಪಡಿತರ ಚೀಟಿಯನ್ನು ನೀಡಲಾಗುತ್ತಿದೆ. ಇದಕ್ಕೆ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಅರ್ಹ ಕಾರ್ಮಿಕರು ಸಮೀಪದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
*ಸಹಾಯವಾಣಿ ನೆರವು*
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಇಲಾಖೆಯ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಇಲ್ಲವೇ ಸಹಾಯವಾಣಿ 1967 ಅನ್ನು (ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30) ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.