ಮುದಗಲ್: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ಸಂಸತ್ ಕಮಿಟಿ ಅಧ್ಯಕ್ಷರಿಗೆ ಬರೆದ ಮನವಿಯನ್ನು ಗ್ರಾಮಲೆಕ್ಕಾಧಿಕಾರಿ ದೀಪಿಕಾ ರಾಠೋಡಗೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರಮುಖರು ಶುಕ್ರವಾರ ಸಲ್ಲಿಸಿದರು.
ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಕಾಯ್ದೆ ಸುಧಾರಣೆ ಹೆಸರಿನಲ್ಲಿ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವುದು ಆತಂಕಕಾರಿ ವಿಷಯವಾಗಿದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ದಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ನಡೆಸಿದೆ ಎಂದು ದೂರಿದರು.
ಕೇಂದ್ರ ಸರ್ಕಾರದ ಕ್ರಮ ಜಾತ್ಯತೀತ ಮೌಲ್ಯಗಳ ವಿರುದ್ಧವಾಗಿದೆ. ಸಂಸತ್ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಜಂಟಿ ಸಂಸದೀಯ ಸಮಿತಿ ತಿದ್ದುಪಡಿ ಕಾಯ್ದೆ ಜಾರಿಯಾಗುವುದನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿದರು.