

ಮುಂಬೈ: ಬಾಲಿವುಡ್ ಚಿತ್ರರಂಗದ ಸ್ಟಾರ್ ನಟ ಹೃತಿಕ್ ರೋಷನ್ ಮತ್ತು ಟಾಲಿವುಡ್ನ ಜೂನಿಯರ್ ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ 'ವಾರ್ 2' ಚಿತ್ರದ ಬಗ್ಗೆ ಇದೀಗ ಅಧಿಕೃತ ಮಾಹಿತಿಯೊಂದು ಲಭಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಚಿತ್ರ, ಅಭಿಮಾನಿಗಳ ಮನದಲ್ಲಿ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.
ಚಿತ್ರದ ಬಗ್ಗೆ ಘೋಷಿಸಿದ ಮೊದಲ ದಿನದಿಂದಲೂ ಟ್ರೆಂಡಿಂಗ್ನಲ್ಲಿರುವ 'ವಾರ್ 2', ಇಬ್ಬರು ಸ್ಟಾರ್ ನಟರ ಅಭಿಮಾನಿಗಳಿಗೆ ಮನರಂಜನೆಯ ಮಹಾಪೂರವನ್ನೇ ಹರಿಸಲಿದೆ ಎಂಬ ನಿರೀಕ್ಷೆ ಹೆಚ್ಚಿದೆ. ಸದ್ಯ ಚಿತ್ರ ಯಾವ ದಿನ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂಬ ಮಾಹಿತಿ ಈಗ ಅಧಿಕೃತವಾಗಿ ಘೋಷಣೆಯಾಗಿದೆ.
ಇದನ್ನೂ ಓದಿ: ಡಿಸಿಸಿಬಿಗೆ ದುಗ್ಗಪ್ಪ ಗೌಡ ರಾಜೀನಾಮೆ
ಆಯನ್ ಮುಖರ್ಜಿ ನಿರ್ದೇಶನದ ಆಕ್ಷನ್-ಥ್ರಿಲ್ಲರ್ 'ವಾರ್ 2' ಚಿತ್ರದಲ್ಲಿ ಹೃತಿಕ್ ರೋಷನ್ ಮತ್ತು ಜೂ. ಎನ್ಟಿಆರ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಚಿತ್ರ ತಯಾರಕರು ಸಿನಿಮಾವನ್ನು ಜನವರಿ 24, 2025 ರಂದು ಗಣರಾಜ್ಯೋತ್ಸವದ ವಾರದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಆದಿತ್ಯ ಚೋಪ್ರಾ ನಿರ್ಮಾಣದ ಈ ಚಿತ್ರದ ಚಿತ್ರೀಕರಣವನ್ನು ಶೀಘ್ರವೇ ಮುಗಿಸಲು ನಿರ್ಧರಿಸಲಾಗಿದೆ,(ಏಜೆನ್ಸೀಸ್).