More

    ವಾರ್ಡ್‌ಗಳಿಗೆ ಮೂಲಸೌಕರ್ಯ ಒದಗಿಸಲು ಬಳ್ಳಾರಿ ಮಹಾನಗರ ಪಾಲಿಕೆ ಮುಂದೆ ನಿವಾಸಿಗಳ ಪ್ರತಿಭಟನೆ

    ಬಳ್ಳಾರಿ: ಮೂಲಸೌಕರ್ಯ ಹಾಗೂ ಸ್ವಚ್ಛತೆ ಕಾರ್ಯಕ್ಕೆ ಹೆಚ್ಚು ಒತ್ತು ನೀಡುವಂತೆ ಒತ್ತಾಯಿಸಿ ಶನಿವಾರ ವಿವಿಧ ವಾರ್ಡ್ ನಿವಾಸಿಗಳು ಶನಿವಾರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

    ಸಮಾಜ ಸೇವಕ ಪ್ರಭಂಜನ್ ಕುಮಾರ್ ಮಾತನಾಡಿ, ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಮೂಲ ಸೌಕರ್ಯ ಮರೀಚಿಕೆಯಾಗಿದೆ. ತೆರೆದ ಚರಂಡಿಗಳಲ್ಲಿ ತ್ಯಾಜ್ಯ ತುಂಬಿದ್ದು, ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿವೆ. ಇದರಿಂದ ದುರ್ವಾಸನೆ ಬೀರುವ ಜತೆಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕಸ ವಿಲೇವಾರಿ ವಾಹನಗಳು ಸರಿಯಾಗಿ ಬರುತ್ತಿಲ್ಲ. ಹೀಗಾಗಿ ಜನರು ರಸ್ತೆಗೆ ತ್ಯಾಜ್ಯ ಎಸೆಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಗರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣ ಕೊರತೆ ಇದ್ದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಮೂಲಸೌಕರ್ಯ ಒದಗಿಸುವುದರ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ಬಳಿಕ ಪಾಲಿಕೆಯ ಇಂಜಿನಿಯರಿಂಗ್ ವಿಭಾಗದ ಅಧಿಕಾರಿ ರಾಘವೇಂದ್ರ ಗುರುಗೆ ಮನವಿ ಸಲ್ಲಿಸಲಾಯಿತು. ವಾರ್ಡ್‌ನ ನಿವಾಸಿಗಳಾದ ಎಂ.ಚಂಚಯ್ಯ, ಕುಮಾರ್, ಪ್ರವೀಣ್, ಮಹಾದೇವ್, ರಾಮಾಂಜನಿ, ಆಶೋಕ್, ಮಲ್ಲೇಶ್, ಕುಮಾರ್ ಆಂಜನೇಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts