

ಚಾಮರಾಜನಗರ: ಕೊಳ್ಳೇಗಾಲ ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ( S Jayanna ) ಅನಾರೋಗ್ಯದಿಂದ ನಿಧನವಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎಸ್.ಜಯಣ್ಣ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಲು ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಜಯಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಡಿ.7 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯ ಇವರ ಮನೆಗೆ ತೆರಳಿ ಊಟ ಮಾಡಿ ಹೋಗಿದ್ದರು.