More

    ಕೋಮು ಸೌಹಾರ್ದತೆ ಕದಡುವವರ ವಿರುದ್ಧ ಎಚ್ಚರಿಕೆ

    ಮಡಿಕೇರಿ:

    ಕೋಮು ಸೌಹಾರ್ದತೆ ಕದಡುವ ರೀತಿಯ ತಮಾಷೆ ವಿಡಿಯೋಗಳನ್ನು ಮಾಡುವುದು ಮತ್ತು ತಮಾಷೆ ವೀಡಿಯೋಗಳಲ್ಲಿನ ಧ್ವನಿ ಬದಲಾಯಿಸಿ ಶಾಂತಿ ಕದಡುವ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡು ಅಪ ಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಎಸ್‌ಪಿ ಕೆ. ರಾಮರಾಜನ್ ಎಚ್ಚರಿಸಿದ್ದಾರೆ.

    ಸಮುದಾಯ, ಜಾತಿ, ಧರ್ಮ ಅಥವಾ ವ್ಯಕ್ತಿಗಳ ವಿರುದ್ಧ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ ಮಾಡಿರುವ ವಿಡಿಯೋಗಳನ್ನು ಮಾರ್ಪಡಿಸಿ ನಿಜ ಎಂಬುದಾಗಿ ನಂಬಿಸಿ ಸಮುದಾಯದ ಒಳಗೆ ಭೇದ-ಭಾವ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ಕಂಡುಬಂದಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚುವ ಮೂಲಕ ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಪ್ರಚೋದನಾಕಾರಿ ಪದಗಳನ್ನು ಬಳಸಿ ಯಾವುದೇ ಸಮುದಾಯದ ವಿರುದ್ಧ ಸುಳ್ಳು ಸುದ್ದಿಗಳನ್ನು ಹಂಚಿಕೊಂಡು ಅಪಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಮುಂದೆಯೂ ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಹಾಗೂ ಸಮುದಾಯವನ್ನು ಒಡೆದು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಂಡು ಅಪಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಸಂದೇಶ, ಭಾವಚಿತ್ರ, ವಿಡಿಯೋ ಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳುಬೇಕು. ಇಲಾಖೆ ಸಾಮಾಜಿಕ ಜಾಲತಾಣಗಳ ಸಂಪೂರ್ಣ ನಿಗಾವಹಿಸಿದ್ದು, ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್‌ಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts