ಹೊಸ ಸರ್ಕಾರಕ್ಕೆ ಲಿಂಗಾಯತ ಸಮುದಾಯದ ಎಚ್ಚರಿಕೆ: ಬೇಡಿಕೆ ಏನು?

Shamanur Shivashankarappa
ಶಾಮನೂರು ಶಿವಶಂಕರಪ್ಪ
Published on

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಎರಡರಿಂದಲೂ ವಂಚಿತವಾಗಿರುವ ಲಿಂಗಾಯತ ಸಮುದಾಯ ಇದೀಗ ಹೊಸ ಸರ್ಕಾರದ ಮುಂದೆ ಪ್ರಮುಖ ಬೇಡಿಕೆಯನ್ನು ಇರಿಸಿದ್ದು, ಈಡೇರಿಸದಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬುದ್ಧಿ ಕಲಿಸುವುದು ಖಚಿತ ಎಂಬ ಎಚ್ಚರಿಕೆಯನ್ನೂ ನೀಡಿದೆ.

ನಮ್ಮ ಲಿಂಗಾಯತ ಸಮುದಾಯ ಹೊಸ ಸರ್ಕಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆಯಲ್ಲಿತ್ತು. ಆದರೆ ಅವೆರಡೂ ಆಯ್ಕೆಗಳು ಮುಗಿದುಹೋಗಿದ್ದು, ಉಳಿದ ಇನ್ನೊಂದು ಬೇಡಿಕೆಯನ್ನು ಈಡೇರಿಸಲೇಬೇಕು ಎಂದು ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಎಚ್ಚರಿಕೆ ನೀಡಿದ್ದಾರೆ.

ನಮ್ಮವರು ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿದ್ದಾರೆ. ಮಂತ್ರಿಮಂಡಲದಲ್ಲಿ ನಮಗೆ ಹೆಚ್ಚಿನ ಸ್ಥಾನ ನೀಡಬೇಕು. ಒಂದು ವೇಳೆ ಸಚಿವಸಂಪುಟದಲ್ಲಿ ಲಿಂಗಾಯತರಿಗೆ ಪ್ರಾಧಾನ್ಯತೆ ನೀಡದಿದ್ದರೆ ನಮ್ಮವರು ಲೋಕಸಭೆ ಚುನಾವಣೆಯಲ್ಲಿ ಬುದ್ಧಿ ಕಲಿಸುವುದು ಖಚಿತ ಎಂದು ಅವರು ಎಚ್ಚರಿಕೆ ನೀಡಿರುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net