More

    ತ್ರಿಫೇಸ್ ವಿದ್ಯುತ್ ನೀಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

    ಚಿಕ್ಕಮಗಳೂರು: ನಗರ ಹಾಗೂ ಗ್ರಾಮ ಎಂಬ ತಾರತಮ್ಯ ಮಾಡದೆ ಇನ್ನೂಂದು ವಾರದ ಒಳಗಾಗಿ ೭ ಗಂಟೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡದಿದ್ದಲ್ಲಿ ಮೆಸ್ಕಾಂ ಎದುರು ಬೆಂಕಿ ಹಾಕಿ ಅಡುಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ತಿಳಿಸಿದರು.

    ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡದೇ ಇದ್ದಲ್ಲಿ ಮೆಸ್ಕಾಂ ಅಧಿಕಾರಿ, ಸಿಬ್ಬಂದಿ ಫ್ಯಾನ್ ಬಳಸದೆ ಕೆಲಸ ಮಾಡಬೇಕು ಎಂದು ನಿರ್ಬಂಧ ಹೇರಲಾಗುವುದು. ರೈತರನ್ನು ಸರ್ಕಾರ ಕಡೆಗಣಿಸಿದ್ದು ಕೂಡಲೇ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.
    ರೈತರಿಗೆ ಅಗತ್ಯವಾದ ವಿದ್ಯುತ್ ಸರಬರಾಜು ಮಾಡಬೇಕು. ವಿಳಂಬ ಮಾಡಿದರೆ ಮುಂದೆ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ನಿರಂತರ ಕಪ್ಪು ಭಾವುಟ ಪ್ರದರ್ಶನ ಮಾಡುತ್ತೇವೆ. ಸಮರ್ಪಕ ವಿದ್ಯುತ್ ಇಲ್ಲದೆ ರೈತರ ಅಡಕೆ, ಶುಂಠಿ, ಸೇರಿದಂತೆ ವಿವಿಧ ಬೆಳೆಗಳು ನೆಲಕಚ್ಚಿದ್ದು ರೈತರ ಮನೆಗಳು ಬೆಂದು ಹೋಗುತ್ತಿರುವ ಈ ಸಂದರ್ಭದಲ್ಲಿ ಬೋರ್‌ವೆಲ್ ಲಾರಿ ಮಾಲೀಕರು ಹಗಲು ದರೋಡೆ ಮಾಡುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ನ್ಯಾಯಯುತ ನಿಗಧಿತ ದರ ನಿಗಧಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಮಹೇಶ್ ಮತನಾಡಿ, ಜಿಲ್ಲೆಯಲ್ಲಿ ವಿದ್ಯುತ್ ಕೊರತೆಯಿದ್ದರೂ ಮೆಸ್ಕಾಂ ನಗರ ಪ್ರದೇಶ ಮತ್ತು ಗ್ರಾಮೀಣ ಭಾಗ ಎಂದು ತಾರತಮ್ಯ ಮಾಡುತ್ತಿದೆ. ಸರ್ಕಾರ ೭ ಗಂಟೆ ಕಾಲ ರೈತರಿಗೆ ವಿದ್ಯುತ್ ನೀಡಲು ಅನುಮತಿ ನೀಡಿದ್ದರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ರೈತರಿಗೆ ಮತ್ತು ಗ್ರಾಮೀಣ ಪ್ರದೇಶಕ್ಕೆ ವಿದ್ಯುತ್ ಕಡಿತಗೂಳಿಸಿ ರೈತರು ಮತ್ತು ಹಳ್ಳಿಯ ಮುಗ್ಧ ಜನರು ಉಸಿರಾಡುವುದೇ ಕಷ್ಟವಾಗಿದೆ ಎಂದು ಆರೋಪಿಸಿದರು.
    ದಿನದಲ್ಲಿ ಹಗಲು ೪ ಗಂಟೆ ವಿದ್ಯುತ್ ನೀಡುತ್ತಿದ್ದು, ರಾತ್ರಿ ವೇಳೆ ೩-೪ ಸಾರಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತಿದ್ದಾರೆ. ಮಧ್ಯರಾತ್ರಿಯಲ್ಲಿ ವಿದ್ಯುತ್‌ನ್ನು ತೆಗೆದರೆ ಬೆಳಗ್ಗೆ ೭ ಗಂಟೆ ವಿದ್ಯುತ್ ನೀಡುತ್ತ ಜನರಿಗೆ ಮೋಸ ಮಾಡುತ್ತಿದ್ದಾರೆ. ಜನರ ಆಕ್ರೋಶ ಮುಗಿಲು ಮುಟ್ಟಿದ್ದು, ರೈತರು ಸರ್ಕಾರದ ವಿರುದ್ದ ಮತ್ತು ಮೆಸ್ಕಾಂ ಇಲಾಖೆಗೆ ಮುತ್ತಿಗೆ ಹಾಕಿ ಇಲಾಖೆಯ ಮುಂದೆ ನಿರಂತರ ಚಳವಳಿ ನಡೆಸಲು ನಿರ್ಧರಿಸಲಾಗಿದೆ ಎಂದರು.
    ಸುದ್ದಿಗೋಷ್ಟಿಯಲ್ಲಿ ರೈತ ಸಂಘದ ಖಜಾಂಚಿ ಶಿವಣ್ಣ, ಯುವ ಘಟಕದ ಅಧ್ಯಕ್ಷ ದರ್ಶನ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts