ಕೇರಳ-ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ, ಮೀನುಗಾರರಿಗೆ ಎಚ್ಚರಿಕೆ! ಈ ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ | IMD

ವಿಜಯವಾಣಿ (34)
Published on

IMD Alert: ಮುಂದಿನ ಐದು ದಿನಗಳವರೆಗೆ ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ 115.6 ಮಿ.ಮೀನಿಂದ 204.4 ಮಿ.ಮೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್​ ನೀಡಲಾಗಿದೆ. ಇಂದು (ಜು.20) ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಟ್​ ಅಲರ್ಟ್​ ಘೋಷಿಸಲಾಗಿದೆ. ಇನ್ನು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ ಮೀನುಗಾರರು ಸಹ ಜಾಗರೂಕರಾಗಿರಲು ಸೂಚಿಸಲಾಗಿದ್ದು, ಜುಲೈ 20ರಿಂದ ಜುಲೈ 22 ರವರೆಗೆ ಕೇರಳ-ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಜುಲೈ 20 ರಿಂದ ಜುಲೈ 24 ರವರೆಗೆ ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net