ವಾರಂಟ್ ಆರೋಪಿಯ ಬಂಧನ

arrest
Published on

ಕಾಸರಗೋಡು: ವಾರಂಟ್ ಆರೋಪಿ, ಮಧೂರು ಸನಿಹದ ಬಿಲಾಲ್‌ನಗರ ನಿವಾಸಿ ಮನ್ಸೂರ್ ಎಂಬಾತನನ್ನು ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಈತನ ವಿರುದ್ಧ ವಿದ್ಯಾನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ವಾರಂಟ್ ಜಾರಿಗೊಳಿಸಲಾಗಿದ್ದು, ವಿಮಾನ ನಿಲ್ದಾಣಗಳಿಗೂ ಮಾಹಿತಿ ರವಾನಿಸಲಾಗಿತ್ತು. ಬುಧವಾರ ಈತ ಊರಿಗೆ ಆಗಮಿಸುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಣ್ಣೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದು, ವಿಮಾನದಿಂದ ಇಳಿದ ತಕ್ಷಣ ಈತನನ್ನು ವಶಕ್ಕೆ ತೆಗೆದುಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net