20.3 C
Bangalore
Sunday, December 15, 2019

ಹೈಕೋರ್ಟ್ ಜಡ್ಜ್​ ವಿರುದ್ಧ ದೌರ್ಜನ್ಯದ ಆರೋಪ ಮಾಡಿದ್ದ ಸೊಸೆ; ಆದರೆ ಆಕೆಯ ಪತಿ ಹೇಳುತ್ತಿರುವುದೇ ಬೇರೆ…ಅಂದು ಏನಾಗಿತ್ತು ಗೊತ್ತಾ?

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು ಪತಿ ನೂಟಿ ವಸಿಷ್ಠ ಕೂಡ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾಗಿ ಹೇಳಿ ವಿಚ್ಛೇದನ ಕೊಡಿಸುವಂತೆ ಹೇಳಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವ ಜತೆಗೆ ತನ್ನ ಮೇಲೆ ದೌರ್ಜನ್ಯ ನಡೆದಿದ್ದ ಸಿಸಿಟಿವಿ ಕ್ಯಾಮರಾ ಫೂಟೇಜ್​ಗಳನ್ನೂ ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿದ್ದರು.

ಸಿಂಧು ಶರ್ಮಾ ನೀಡಿದ್ದ ಆ ಸಿಸಿಟಿವಿ ಕ್ಯಾಮರಾ ವಿಡಿಯೋ ಸಿಕ್ಕಾಪಟೆ ವೈರಲ್​ ಆಗಿದ್ದಲ್ಲದೆ ಹೈಕೋರ್ಟ್​ ನ್ಯಾಯಮೂರ್ತಿ ವಿರುದ್ಧ ಅಸಮಾಧಾನದ ಕಾಮೆಂಟ್​ಗಳನ್ನು ಹಾಕಲಾಗಿತ್ತು. ಇದೀಗ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ.

ಸಿಂಧು ಶರ್ಮಾ ಪತಿ ನೂಟಿ ವಸಿಷ್ಠ ಅವರು ಮಾಧ್ಯಮವೊಂದಕ್ಕೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಪಟ್ಟ ವಿಡಿಯೋ ಎಂದು ಹೇಳಲಾಗಿದ್ದರೂ ವಾಸ್ತವವಾಗಿ ಅದು ಬೇರೆ ಇದೆ. ಸಿಂಧು ತನಗೆ ಬೇಕಾದಷ್ಟು ಸೀನ್​ಗಳ ಕ್ಲಿಪ್​ಗಳನ್ನು ಮಾತ್ರ ಕಟ್​ ಮಾಡಿ ಬಿಡುಗಡೆ ಮಾಡಿದ್ದಾರೆ. ನಿಜಕ್ಕೂ ಅಲ್ಲಿ ನಡೆದಿದ್ದೇ ಬೇರೆ ಎಂದು ವಸಿಷ್ಠ ಅವರು ತಿಳಿಸಿದ್ದಾರೆ.

ಅಂದು ನಡೆದಿದ್ದೇ ಬೇರೆ. ಅವತ್ತು ಸಿಂಧು ಶರ್ಮಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು. ವಿಡಿಯೋದಲ್ಲಿ ಇರುವುದು ನಾನು, ನನ್ನ ತಂದೆ, ನನ್ನ ತಾಯಿಯೇ ಹೌದು. ಆದರೆ ನಾವ್ಯಾರೂ ಅಂದು ಆಕೆಯ ಮೇಲೆ ದೌರ್ಜನ್ಯ ನಡೆಸಲಿಲ್ಲ. ಆತ್ಮಹತ್ಯೆ ಮಾಡಿಕೊಳ್ಳದಂತೆ ಆಕೆಯನ್ನು ತಡೆಯುತ್ತಿದ್ದೆವು ಎಂದು ಸ್ಪಷ್ಟನೆ ನೀಡಿದ್ದಾರೆ.

ನನ್ನ ತಂದೆಯ ಹೆಸರು ಹಾಳುಮಾಡಲು ಸಿಂಧು ಹೀಗೆ ಮಾಡಿದ್ದಾಳೆ ಎಂದು ವಸಿಷ್ಠ ಅವರು ಆರೋಪ ಮಾಡಿದ್ದಾರೆ. ನಾವು ಅವರಿಂದ ಯಾವುದೇ ವರದಕ್ಷಿಣೆ ತೆಗೆದುಕೊಂಡಿಲ್ಲ. ಫೂಟೇಜ್​ನ ಉಳಿದ ತುಣುಕುಗಳು ಎಲ್ಲಿ ಎಂದು ಸಿಂಧು ಅವರನ್ನೇ ಕೇಳಿ ಎಂದಿದ್ದಾರೆ.

ಸಿಂಧು ಶರ್ಮ ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ವಿಚಾರನೆ ಸೆ.24ರಂದು ನಡೆಯಲಿದೆ.

VIDEO: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸೊಸೆಯಿಂದ ಕೌಟುಂಬಿಕ ದೌರ್ಜನ್ಯ ಆರೋಪ: ಸಾಕ್ಷ್ಯಕ್ಕೆ ಸಿಸಿ ಕ್ಯಾಮರಾ ದೃಶ್ಯ

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...