

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ನ್ಯೂಜಿಲೆಂಡ್ (NewZealand) ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯರು ಪ್ರವಾಸಿ ತಂಡಕ್ಕೆ ಆಘಾತವನ್ನು ನೀಡುವಲ್ಲಿ ಯಶಸ್ವಿಯಾಗಿದ್ದು, ಮೊದಲ ಪಂದ್ಯದಲ್ಲಿ ಆದ ಲೋಪ ದೋಷಗಳನ್ನು ಸರಿಪಡಿಸಿಕೊಂಡು ಎರಡನೇ ಟೆಸ್ಟ್ನಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡುವ ಮುನ್ಸೂಚನೆ ನೀಡಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಪ್ರವಾಸಿ ನ್ಯೂಜಿಲೆಂಡ್ ತಂಡವು ಡೆವೊನ್ ಕಾನ್ವೆ (76 ರನ್, 141 ಎಸೆತ, 11 ಬೌಂಡರಿ), ಕನ್ನಡಿಗ ರಚಿನ್ ರವೀಂದ್ರ (65ರನ್, 105 ಎಸೆತ, 5 ಬೌಡಂರಿ, 1ಸಿಕ್ಸರ್) ಅರ್ಧಶತಕದಪ ಳವಾಗಿ 79.1 ಓವರ್ನಲ್ಲಿ 259 ರನ್ಗಳಿಗೆ ಆಲೌಟ್ ಆಯಿತು. ಮೊದಲನೇ ಸೆಷನ್ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ ಪ್ರವಾಸಿ ತಂಡವು ವಾಷಿಂಗ್ಟನ್ ಸುಂದರ್ (23.1-4-59-7), ಆರ್. ಅಶ್ವಿನ್ (24-2-64-3) ಆಫ್‌ಸ್ಪಿನ್ (Off Spin) ದಾಳಿಗೆ ತತ್ತರಿಸಿ ಆಲೌಟ್ ಆಯಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ಗೆ ಇಳಿದ ಪ್ರವಾಸಿ ತಂಡವು (NewZealand) ಉತ್ತಮ ಆರಂಭ ಪಡೆಯಿತಾದರೂ ಅಶ್ವಿನ್ (Ashwin) ಹಾಗೂ ವಾಷಿಂಗ್ಟನ್ ಸುಂದರ್ (Washington Sundar) ಆಫ್‌ಸ್ಪಿನ್ (Off Spin) ದಾಳಿಗೆ ನಲುಗಿ 259 ರನ್ಗಳಿಗೆ ಆಲೌಟ್ ಆಯಿತು. ಮೊದಲನೇ ಇನ್ನಿಂಗ್ಸ್‌ನಲ್ಲಿ ಆಫ್ ಸ್ಪಿನ್ನರ್ಗಳಿಬ್ಬರು ಎದುರಾಳಿ ತಂಡವನ್ನು ಆಲೌಟ್ ಮಾಡಿವ ಎಲ್ಲರ ಗಮನ ಸೆಳೆದಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ (Indian Cricket) ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಈವರೆಗೂ 4 ಟೆಸ್ಟ್ ಪಂದ್ಯಗಳನ್ನು ಆಡಿರುವ ವಾಷಿಂಗ್ಟನ್ ಸುಂದರ್ (Washington Sundar) 7 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೂರು ವರ್ಷದ ಬಳಿಕ ಟೆಸ್ಟ್ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿದ ಸುಂದರ್ (Washington Sundar) 7 ವಿಕೆಟ್‌ಗಳನ್ನು ಪಡೆಯುವ ಮೂಲಕ ತಂಡಕ್ಕೆ ನೆರವಾದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಇನ್ನಿಂಗ್ಸ್‌ನಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದರು. ಇದಲ್ಲದೆ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಇನ್ನಿಂಗ್ಸ್ ಒಂದರಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಸುಂದರ್ (Washington Sundar) ಉರುಳಿಸಿದ 7 ವಿಕೆಟ್‌ಗಳಲ್ಲಿ 5 ಬ್ಯಾಟ್ಸ್‌ಮನ್‌ಗಳನ್ನು ಬೌಲ್ಡ್ ಮಾಡಿದರು. ಈ ಮೂಲಕ ಈ ಸಾಧನೆ ಮಾಡಿದ ಭಾರತದ 5 ನೇ ಬೌಲರ್ ಆದರು. ಇದಕ್ಕೂ ಮುನ್ನ ಜಸುಭಾಯ್ ಪಟೇಲ್, ಬಾಪು ನಾಡಕರ್ಣಿ, ಅನಿಲ್ ಕುಂಬ್ಳೆ ಮತ್ತು ರವೀಂದ್ರ ಜಡೇಜಾ ಕೂಡ ಈ ಸಾಧನೆ ಮಾಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದ ರವಿಚಂದ್ರನ್ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಇದೀಗ ಮೊದಲ ಸ್ಥಾನದಲ್ಲಿದ್ದಾರೆ. ಅಶ್ವಿನ್ ಇದುವರೆಗೆ 189 ವಿಕೆಟ್‌ಗಳನ್ನು ಪಡೆದಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ನಾಥನ್ ಲಿಯಾನ್ (187 ವಿಕೆಟ್) ಇದ್ದಾರೆ.
https://www.vijayavani.net/st-somashekar-tells-that-8-bjp-mla-join-congress-in-future-days
https://www.vijayavani.net/aicc-announces-candiate-for-shiggaon-bypoll