More

    ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ತ್ಯಾಜ್ಯ ತೆರವು

    ಚಾಮರಾನಗರ: ಹನೂರು ತಾಲೂಕಿನ ತಾಳುಬೆಟ್ಟದಿಂದ ಮಲೆಮಹದೇಶ್ವರ ಬೆಟ್ಟದವರೆಗಿನ ಮಾರ್ಗದಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಶನಿವಾರ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತೆರೆವುಗೊಳಿಸಿದೆ.


    ಮ.ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಿ ಘೋಷಿಸಲಾಗಿದೆ. ಹಾಗಾಗಿ, ಮ.ಬೆಟ್ಟಕ್ಕೆ ಆಗಮಿಸುವ ಭಕ್ತರು ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಪ್ರಾಧಿಕಾರ, ಅರಣ್ಯ ಇಲಾಖೆ ಹಾಗೂ ಸಂಘ ಸಂಸ್ಥೆಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ, ಭಕ್ತರು ಪ್ಲಾಸ್ಟಿಕ್ ವಸ್ತುಗಳನ್ನು ಅರಣ್ಯ ಪ್ರದೇಶ ಹಾಗೂ ಎಲ್ಲೆಂದರಲ್ಲಿ ಬಿಸಾಡುತ್ತಿದ್ದರು. ಇದು ಶ್ರೀ ಕ್ಷೇತ್ರದ ನೈರ್ಮಲ್ಯಕ್ಕೆ ತೊಡುಕಾಗಿ ಪರಿಣಮಿಸಿತ್ತಲ್ಲದೇ ವನ್ಯಜೀವಿಗಳ ಪ್ರಾಣಕ್ಕೆ ಕುತ್ತು ತರುವಂತಾಗಿತ್ತು. ಈ ದಿಸೆಯಲ್ಲಿ ಮಹಾ ಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತರು ಕಾಲ್ನಡಿಗೆಯ ಮೂಲಕ ಮ.ಬೆಟ್ಟಕ್ಕೆ ಆಗಮಿಸಿದ್ದರು. ಈ ಹಿನ್ನಲೆ ಭಕ್ತರು ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲಾಗಿತ್ತು. ಆದರೂ ಭಕ್ತರು ತಾಳುಬೆಟ್ಟದಿಂದ ಮ.ಬೆಟ್ಟದವರೆಗೆ ಸ್ವಚ್ಛಗೊಳಿಸಲಾಯಿತು. ಅದರಲ್ಲೂ ತಾಳುಬೆಟ್ಟದಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ ಹಾಗೂ ಪ್ಲಾಸ್ಟಿಕ್ ಕೈ ಚೀಲವನ್ನು ಬಿಸಾಡಿದ್ದರು.

    ಇದರಿಂದ ಈ ಮಾರ್ಗದಲ್ಲಿ ಅನೈರ್ಮಲ್ಯ ನಿರ್ಮಾಣವಾಗಿತ್ತು. ಇದನ್ನು ಮನಗಂಡ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು ಶನಿವಾರ ಸಿಬ್ಬಂದಿಗಳನ್ನು ನಿಯೋಜಿಸಿ ರಸ್ತೆ ಬದಿ, ಕಾಲ್ನಡಿಗೆಯ ದಾರಿ ಹಾಗೂ ಅರಣ್ಯ ಪ್ರದೇಶದ ಆಸುಪಾಸು ಸಂಗ್ರಹವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆರೆವುಗೊಳಿಸಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts