

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 30ಕ್ಕಿಂತ ಹೆಚ್ಚು ಫ್ಲಾೃಟ್ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ಗಳು, 5000 ಚದರ ಅಡಿಗೂ ಅಧಿಕ ವಿಸ್ತೀರ್ಣದ ಸಂಕೀರ್ಣಗಳು, ಉದ್ದಿಮೆ ಮತ್ತು ವ್ಯಾಪಾರಸ್ಥರು, ಮಾಲ್ಗಳು, ವಾಣಿಜ್ಯ ಸಂಸ್ಥೆಗಳು, ಪ್ರತೀ ದಿನ ಸರಾಸರಿ 100 ಕೆ.ಜಿ ಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವವರು ತಮ್ಮಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯವನ್ನು ಹಸಿ, ಒಣ ಹಾಗೂ ಅಪಾಯಕಾರಿ ತ್ಯಾಜ್ಯಗಳಾಗಿ ವಿಂಗಡಿಸಬೇಕು . ಹಸಿ ತ್ಯಾಜ್ಯವನ್ನು ತಮ್ಮ ಆವರಣದಲ್ಲಿಯೇ ಸಂಸ್ಕರಿಸಿ ಗೊಬ್ಬರ ಉತ್ಪತ್ತಿ ಮಾಡುವ ಕುರಿತು ಅಗತ್ಯ ಕ್ರಮ ವಹಿಸಲಿ 2025 ಜ.15ರವರೆಗೆ ಸಮಯಾವಕಾಶ ನಿಗದಿಪಡಿಸಲಾಗಿದೆ.
ಜನವರಿ ಅಂತ್ಯದಲ್ಲಿ ಮನಪಾ ವ್ಯಾಪ್ತಿಯ ಬೃಹತ್ ತ್ಯಾಜ್ಯ ಉತ್ಪಾದಕರು ಹಸಿ ತ್ಯಾಜ್ಯವನ್ನು ತಮ್ಮ ಆವರಣದಲ್ಲಿಯೇ ಸಂಸ್ಕರಿಸಿ ವಿಲೇವಾರಿ ಮಾಡಲು ವಿಫಲವಾದರೆ 15,000 ರೂ.ದಂಡ ವಿಧಿಸಲಾಗುತ್ತದೆ.