ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮದಿನವಾದ ಸೆ.17 ರಿಂದ ಅ.2ರ ಗಾಂಧಿ ಜಯಂತಿವರೆಗೆ ನಗರದಲ್ಲಿ ಸ್ವಚ್ಛತಾ ಅಭಿಯಾನ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸಲಾಗುತ್ತಿದೆ.
ನಗರದಲ್ಲಿ ರಾತ್ರಿ ವೇಳೆ ಪಾಲಿಕೆ ಸಿಬ್ಬಂದಿ ಗಸ್ತು ತಿರುಗಿ ಖಾಲಿ ಜಾಗಗಳಲ್ಲಿ ಕಸ ಸುರಿಯುವವರನ್ನು ಪತ್ತೆ ಮಾಡಿ ದಂಡ ವಿಧಿಸಲಿದ್ದಾರೆ. ವಾಣಿಜ್ಯ ಪ್ರದೇಶಗಳಲ್ಲಿ ಸಂಜೆ ವೇಳೆ ಕಸ ಸಂಗ್ರಹಿಸುವ ಕಾರ್ಯಕ್ರಮ ಆರಂಭಿಸಲಾಗಿದೆ. ಸೋಮವಾರ ರಸ್ತೆ ಮೀಡಿಯನ್ಗಳು, ಬುಧವಾರ ಪಾರ್ಕ್ಗಳನ್ನು ಸ್ವಚ್ಛಗೊಳಿಸುವ ಯೋಜನೆ ರೂಪಿಸಲಾಗಿದೆ ಎಂದು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಹೇಳಿದರು.