More

    ವಾಟಾಳ್ ನಾಗರಾಜ್ ಬಂಧನ, ಬಿಡುಗಡೆ

    ಬೆಳಗಾವಿ: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಹಾಗೂ ಆನ್‌ಲೈನ್ ಶಿಕ್ಷಣ ವಿರೋಧಿಸಿ ಬೆಳಗಾವಿ ಸುವರ್ಣ ವಿಧಾನಸೌಧ ಎದುರು ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದ ವಾಟಾಳ್ ಪಕ್ಷದ ಅಧ್ಯಕ್ಷ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ ಅವರನ್ನು ಹಿರೇಬಾಗೇವಾಡಿ ಟೋಲ್‌ನಲ್ಲಿ ಪೊಲೀಸರು ಶುಕ್ರವಾರ ಬಂಧಿಸಿ, ಬಿಡುಗಡೆ ಮಾಡಿದ್ದಾರೆ.

    ಈ ವೇಳೆ ಮಾತನಾಡಿದ ವಾಟಾಳ್, ಮಕ್ಕಳ ಆರೋಗ್ಯದ ದೃಷ್ಟಿಯಿಂದ ದೇಶದ ವಿವಿಧ ರಾಜ್ಯಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ರದ್ದುಪಡಿಸಿ, ವಿದ್ಯಾರ್ಥಿಗಳನ್ನು ಪಾಸ್ ಮಾಡಿವೆ. ಜತೆಗೆ ಮುಂಬೈನಲ್ಲಿ ಐಟಿಐ ಹಾಗೂ ಗೋವಾದಲ್ಲಿ ಅಂತಿಮ ವರ್ಷದ ಪದವಿ ಹೊರತುಪಡಿಸಿ, ಇನ್ನುಳಿದ ಎಲ್ಲ ಪದವಿ ಪರೀಕ್ಷೆಗಳನ್ನೂ ರದ್ದುಪಡಿಸಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಿದ್ದಾರೆ. ಪದವಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಪಾಸ್ ಮಾಡಬೇಕು ಎಂದು ಆಗ್ರಹಿಸಿದರು.

    20-23ರಂದು ಪ್ರತಿಭಟನೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದೇ ಆದಲ್ಲಿ ಪ್ರತಿ ವಿದ್ಯಾರ್ಥಿಗೆ 50 ಲಕ್ಷ ರೂ. ಹಾಗೂ ಅವರ ಶಿಕ್ಷಕರಿಗೆ ಸರ್ಕಾರ 25 ಲಕ್ಷ ರೂ. ಠೇವಣಿ ಇಡಬೇಕು ಎಂದು ಒತ್ತಾಯಿಸಿದ ವಾಟಾಳ್, ಪರೀಕ್ಷೆಗಳನ್ನು ರದ್ದು ಮಾಡುವಂತೆ ಒತ್ತಾಯಿಸಿ 23ರಂದು ಶಿಕ್ಷಣ ಸಚಿವ ಸುರೇಶಕುಮಾರ ಅವರ ನಿವಾಸದ ಎದುರು ಪ್ರತಿಭಟನೆ ಮಾಡುತ್ತೇನೆ. ಅಲ್ಲದೆ, ಜೂ. 20ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಮುಂದೆಯೂ ಇದೇ ವಿಚಾರವಾಗಿ ಧರಣಿ ನಡೆಸುತ್ತೇನೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts