Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ವಿಮಾನದಲ್ಲಿ ಮದುವೆ ಪ್ರಸ್ತಾಪ ಒಪ್ಪಿಕೊಂಡ ಗಗನಸಖಿಗೆ ಏರ್​ಲೈನ್ಸ್​ ಕೊಡುಗೆ ಏನು?

Tuesday, 18.09.2018, 1:55 PM       No Comments

ನವದೆಹಲಿ: ವಿಮಾನದಲ್ಲಿ ಗಗನ ಸಖಿಯೊಬ್ಬಳು ವಿವಾಹ ಪ್ರಸ್ತಾಪ ಒಪ್ಪಿಕೊಂಡಿದ್ದಕ್ಕೆ ಚೀನಾ ಈಸ್ಟರ್ನ್​ ಏರ್​ಲೈನ್ಸ್ ಆಕೆಯನ್ನು ಕೆಲಸದಿಂದ ವಜಾ ಮಾಡಿದೆ.

ಹೌದು, ವಿಮಾನ ಟೇಕ್​ ಆಫ್​ ಆದ 30 ನಿಮಿಷದ ನಂತರ ದೀರ್ಘಕಾಲದ ಗೆಳೆಯ ಗಗನಸಖಿಯಾದ ತನ್ನ ಪ್ರೇಯಸಿಗೆ ಪ್ರಯಾಣಿಕರ ಮುಂದೆಯೇ ಮಂಡಿಯೂರಿ ಮದುವೆ ಪ್ರಸ್ತಾಪ ಮಾಡಿದ್ದಾನೆ. ಇದಕ್ಕೆ ಗಗನಸಖಿ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಆದರೆ, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ನಂತರ ಗಗನಸಖಿ ತನ್ನ ಕೆಲಸ ಕಳೆದುಕೊಂಡಿದ್ದಾಳೆ.

ಸೆ.10 ರಂದು ಇ-ಮೇಲ್​ ಮೂಲಕ ಗಗನಸಖಿಗೆ ಏರ್​ಲೈನ್ಸ್​ ಕಂಪನಿ ಕೆಲಸದಿಂದ ವಜಾಗೊಳಿಸಿರುವ ಪತ್ರ ಕಳುಹಿಸಿದೆ. ಹಾಗೇ ಗಗನಸಖಿ ಪ್ರಯಾಣಿಕರ ಸುರಕ್ಷತೆ ಬಗ್ಗೆ ಗಮನ ಹರಿಸದ ಕಾರಣ ಕೆಲಸದಿಂದ ವಜಾ ಮಾಡಿರುವುದಾಗಿ ತಿಳಿಸಿದೆ.

ಆದರೆ, ಚೀನಾ ಈಸ್ಟರ್ನ್​ ಏರ್​ಲೈನ್ಸ್​ ನಡೆಗೆ ಕೋಪಗೊಂಡಿರುವ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಏರ್​ಲೈನ್ಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top