17 C
Bangalore
Monday, December 9, 2019

VIDEO| ಬೆನ್ನಟ್ಟಿ ಬಂದವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಕರಡಿಗೆ ಕಲ್ಲು ತೂರಿ ವಿಕೃತಿ ಮೆರೆದ ಕಾರ್ಗಿಲ್ ವಾಸಿಗಳು

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಕಾರ್ಗಿಲ್​: ಕಡಿದಾದ ಬೆಟ್ಟದಿಂದ ಮೇಲಕ್ಕೆ ಬರಲು ಯತ್ನಿಸುತ್ತಿದ್ದ ಕಂದು ಬಣ್ಣದ ಕರಡಿಯೊಂದಕ್ಕೆ ಯಾರೋ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಕರಡಿ ತನ್ನ ಹಿಡಿತವನ್ನು ಕಳೆದುಕೊಂಡು ಕಲ್ಲು ಬಂಡೆಯ ಮೇಲೆ ಉರುಳಿಕೊಂಡು ಹೋಗಿ ನೀರಿನ ಕಂದಕಕ್ಕೆ ಬಿದ್ದ ಅಮಾನವೀಯ ಘಟನೆ ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್​ ಜಿಲ್ಲೆಯಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ 8 ಸೆಕೆಂಡ್​ ವಿಡಿಯೋವೊಂದನ್ನು ಕಾಶ್ಮೀರ ಪ್ರವಾಸದ ಮಾಜಿ ನಿರ್ದೇಶಕರಾದ ಮಹಮೂದ್​ ಶಾ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದಾರೆ. ಲಡಾಕ್​ ವಲಯದ ಕಾರ್ಗಿಲ್​ ಜಿಲ್ಲೆಯ ದ್ರಾಸ್​ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಸ್ಥಳೀಯ ಗ್ರಾಮಸ್ಥರು ಕರಡಿಯನ್ನು ಕಂಡು ಬೆನ್ನಟ್ಟಿ ಬಂದಿದ್ದರಿಂದ ದಿಗಿಲುಗೊಂಡ ಕರಡಿ ತಪ್ಪಿಸಿಕೊಳ್ಳಲು ಕಡಿದಾದ ಬೆಟ್ಟವನ್ನು ಏರುತ್ತಿರುವಾಗ ಗ್ರಾಮದ ಕೆಲವರು ಕರಡಿಯತ್ತ ಕಲ್ಲುಗಳನ್ನು ತೂರಿ ಕಿರುಚಾಡಿದ್ದಾರೆ. ಇದರಿಂದ ಹೆದರಿ ಸಮತೋಲನ ಕಳೆದುಕೊಂಡು ಕರಡಿ ಬಂಡೆಗಳ ಮೇಲೆ ಉರುಳಿ ನದಿಯೊಳಗೆ ಬೀಳುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್​ಲೋಡ್​ ಆಗುತ್ತಿದ್ದಂತೆ ವೈರಲ್​ ಆದ ವಿಡಿಯೋ ನೋಡಿದ ಹಲವರು ಘಟನೆಯನ್ನು ಖಂಡಿಸಿದ್ದಾರೆ. ವಿಶೇಷವಾಗಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ್​ ಮಫ್ತಿ ಅವರು ಇದೊಂದು ಹೃದಯ ಬಿರಿಯುವ ಹಾಗೂ ಅಮಾನವೀಯ ಘಟನೆ ಎಂದು ಕಿಡಿಕಾಡಿದ್ದಾರೆ.

ಕ್ರಮಕ್ಕೆ ಆಗ್ರಹಿಸಿದ ನೆಟ್ಟಿಗರು
ಕರಡಿಯ ಜತೆ ಅಮಾನವೀಯವಾಗಿ ನಡೆದುಕೊಂಡವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುವಂತೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಆಗ್ರಹಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಅಧಿಕಾರಿಗಳು ಕರಡಿ ಮತ್ತು ಅದರ ಮೇಲೆ ದಾಳಿ ಮಾಡಿದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಹಿರಿಯ ಪೊಲೀಸ್​ ಅಧಿಕಾರಿ ಬಸೀರ್​ ಅಲ್​ ಹಕ್​ ಛೌದರಿ ಅವರು ತನಿಖೆಗೆ ಆದೇಶಿಸಿದ್ದು, ವನ್ಯಜೀವಿ ಸೇರಿದಂತೆ ಇತರೆ ಇಲಾಖೆಯಿಂದ ಕಂದು ಬಣ್ಣದ ಕರಡಿಯ ಪತ್ತೆಗೆ ತಂಡವನ್ನು ರಚಿಸಲಾಗಿದೆ.

ಪ್ರಕರಣ ಸಂಬಂಧ ಎಫ್​ಐಆರ್​ ದಾಖಲಾಗಿದ್ದು, ಕರಡಿಯತ್ತ ಕಲ್ಲು ತೂರಿದವರನ್ನು ಪತ್ತೆ ಹಚ್ಚಲು ನಾವು ಪ್ರಯತ್ನಿಸುತ್ತಿದ್ದೇವೆ. ಅವರ ವಿರುದ್ಧ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಸೀರ್​ ಅಲ್​ ಹಕ್​ ಛೌದರಿ ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...