24.9 C
Bangalore
Wednesday, December 11, 2019

VIDEO| ಪಶುವೈದ್ಯಾಧಿಕಾರಿ ಅತ್ಯಾಚಾರ ಕೊಲೆ: ಆರೋಪಿಗಳ ವಿರುದ್ಧ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಚಪ್ಪಲಿ ಎಸೆತ

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಹೈದರಾಬಾದ್​: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಹೈದರಾಬಾದ್​ನ ಶಾದ್​ನಗರ ಪೊಲೀಸರು ಬಂಧಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಠಾಣೆಯ ಮುಂಭಾಗ ಜಮಾಯಿಸಿದ ಜನಸ್ತೋಮವನ್ನು ನಿಯಂತ್ರಿಸಲು ಹೋದ ಪೊಲೀಸರ ಮೇಲೆಯೇ ಚಪ್ಪಲಿಗಳನ್ನು ಎಸೆದಿರುವ ಘಟನೆ ಶನಿವಾರ ನಡೆದಿದೆ.

ಪ್ರಕರಣದಲ್ಲಿ ಬಂಧಿಸಲಾಗಿರುವ ನಾಲ್ವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಠಾಣೆಯಿಂದ ಚಂಚಲ್​ಗೂಡ ಕೇಂದ್ರ ಕಾರಾಗೃಹಕ್ಕೆ ಆರೋಪಿಗಳನ್ನು ಸ್ಥಳಾಂತರಿಸುವ ಮುನ್ನವೇ ಈ ಘಟನೆ ನಡೆದಿದೆ.

ಠಾಣೆಯ ಮುಂಭಾಗ ಬಹುಸಂಖ್ಯೆಯಲ್ಲಿ ಜನರು ಸೇರಿ ಆರೋಪಿಗಳ ವಿರುದ್ಧ ಘೋಷಣೆ ಕೂಗುತ್ತಾ ಪೊಲೀಸರ ಮೇಲೆ ಚಪ್ಪಲಿ ಎಸೆಯುತ್ತಿರುವ 10 ಸೆಕೆಂಡ್​ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ಪರಿಸ್ಥಿತಿಯನ್ನು ತಹಬದಿಗೆ ತರಲು ಯತ್ನಿಸುವಾಗ ಜನರು ಅವರತ್ತ ಚಪ್ಪಲಿಗಳನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ದರೆ ಸಾಕಾಗುವುದಿಲ್ಲ. ಸಂತ್ರಸ್ತೆ ಅನುಭವಿಸಿದ ನೋವನ್ನೇ ಅವರಿಗೂ ನೀಡಬೇಕು ಎಂದು ಪ್ರತಿಭಟನಾಕಾರರಲ್ಲಿ ಒಬ್ಬರು ಆಗ್ರಹಿಸಿದರು. ನಿಮ್ಮ ಕೈಯಲ್ಲಿ ಶಿಕ್ಷಿಸಲು ಆಗದಿದ್ದರೆ, ನಮ್ಮ ವಶಕ್ಕೆ ನೀಡಿ ಎಂದು ಇನ್ನೊಬ್ಬ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ಹಿನ್ನೆಲೆ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಕೊಲ್ಲೂರಿನಲ್ಲಿ ಪಶುವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ 27 ವರ್ಷದ ಮಹಿಳೆಯ ಶವ ಸುಟ್ಟ ಸ್ಥಿತಿಯಲ್ಲಿ ಶಾದ್​ನಗರದಲ್ಲಿ ಗುರುವಾರ ಪತ್ತೆಯಾಗಿತ್ತು. ಬಳಿಕ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಸಾಕಷ್ಟು ವರದಿಗಳು ಆಯಿತು. ಪ್ರಕರಣ ಸಂಬಂಧ ನಿನ್ನೆಯೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. (ಏಜೆನ್ಸೀಸ್)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...