ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ವಿರುದ್ಧ ದೀದಿ ಪ್ರತಿಭಟನಾ ಮೆರವಣಿಗೆ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿನ ಗಲಭೆ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ವಿರುದ್ಧ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದಾರೆ.

ನಿನ್ನೆ ಅಮಿತ್‌ ಷಾ ಕೈಗೊಂಡಿದ್ದ ಬೃಹತ್‌ ರೋಡ್‌ ಶೋ ವೇಳೆ ಗಲಭೆ ಉಂಟಾಗಿ ಶೈಕ್ಷಣಿಕ ಮತ್ತು ಸಾಮಾಜಿಕ ಹರಿಕಾರರಾದ ಈಶ್ವರಚಂದ್ರ ವಿದ್ಯಾಸಾಗರ್‌ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಷಾ ವಿರುದ್ಧ ಮಮತಾ, ಬೇಲೈಘಾಟ್‌ನಿಂದ ಶ್ಯಾಮ್‌ಬಜಾರ್‌ವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದಾರೆ.

ಈ ಕುರಿತು ಎಎನ್‌ಐ ಟ್ವೀಟ್‌ ಮಾಡಿರುವ ವಿಡಿಯೋದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅವರನ್ನೊಳಗೊಂಡಂತೆ ಪ್ರತಿಭಟನಾ ಮೆರವಣಿಗೆಗೆ ಭಾರೀ ಜನಸಮೂಹವೇ ನೆರೆದಿತ್ತು. ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತ ಮತ್ತು ಬ್ಯಾನರ್ಸ್‌ಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು ಎಂದು ಹೇಳಲಾಗಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *