ಶಾಲೆಯ ಕೊಠಡಿಯಲ್ಲೇ ಪ್ರಾಂಶುಪಾಲ-ಶಿಕ್ಷಕಿಯ ಲವ್ವಿ ಡವ್ವಿ; ವಿಡಿಯೋ ವೈರಲ್​

Teachers Viral Video
Published on

ಲಖನೌ: ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡಿ, ತಿದ್ದಿ ಬುದ್ದಿ ಹೇಳಿ ಮುಂದಿನ ಭವಿಷ್ಯಕ್ಕೆ ದಾರಿದೀಪವಾಗಿ ಮಾದರಿಯಾಗಬೇಕಾಗಿರುವ ಶಿಕ್ಷಕರೇ ಹಾದಿ ತಪ್ಪಿದರೆ ಏನೆಲ್ಲಾ ಆಗಬಹುದು ಎಂಬುದಕ್ಕೆ ಈ ಪ್ರಕರಣವೇ ಜೀವಂತ ಸಾಕ್ಷಿಯಾಗಿದೆ. ಉತ್ತರಪ್ರದೇಶದ ಜೌನ್​ಪುರ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಪ್ರಾಂಶುಪಾಲ ಹಾಗೂ ಶಿಕ್ಷಕಿ ಶಾಲಾ ಕೊಠಡಿಯಲ್ಲೇ ಹೇಯ ಕೃತ್ಯ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಇವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.

ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ, ಪ್ರಾಂಶುಪಾಲ ಹಾಗೂ ಶಿಕ್ಷಕಿ ಶಾಲೆಯ ಕೊಠಡಿಯಲ್ಲೇ ರೊಮ್ಯಾನ್ಸ್‌ ಮಾಡಿದ್ದಾರೆ. ಈ ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯವನ್ನು ರಹಸ್ಯ ಕ್ಯಾಮೆರಾದಲ್ಲಿ ರೆಕಾರ್ಡ್‌ ಮಾಡಲಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಮಹಾನ್​ ವ್ಯಕ್ತಿಗಳ ಫೋಟೋ ಕೂಡ ಇದ್ದು, ಫೋಟೋಗಳ ಮುಂದೆಯೇ ಇಂತಹ ಕೃತ್ಯ ಎಸಗಿದ ಈ ಇಬ್ಬರೂ ಶಿಕ್ಷಕರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಹೇಟ್​ ಡಾಕ್ಟರ್​ ಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಶಿಕ್ಷಕರು ತಮ್ಮ ಘನತೆಯನ್ನು ಮರೆತಾಗ ವಿದ್ಯಾರ್ಥಿಗಳ ಭವಿಷ್ಯ ಏನಾಗಬಹುದು,  ಶಿಕ್ಷಕರು ನಾಚಿಕೆ ಮತ್ತು ವಿನಯವನ್ನು ಬದಿಗಿಟ್ಟು ವಿದ್ಯಾರ್ಥಿಗಳಿಗೆ ಏನನ್ನು ಕಲಿಸುತ್ತಾರೆ ಎಂದು ಕಮೆಂಟ್​ ಮಾಡುವ ಮೂಲಕ ನೆಟ್ಟಿಗರು ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net