More

    ಟಿ20 ವಿಶ್ವಕಪ್‌: ಅಮೆರಿಕಕ್ಕೆ ಹಾರಿದ ಟೀಂ ಇಂಡಿಯಾದ ಮೊದಲ ಬ್ಯಾಚ್: ಐಪಿಎಲ್ ಬಳಿಕ 2ನೇ ಬ್ಯಾಚ್ ಪ್ರಯಾಣ

    ನವದೆಹಲಿ: ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗಾಗಿ ಭಾರತ ಕ್ರಿಕೆಟ್ ತಂಡದ ಮೊದಲ ಬ್ಯಾಚ್ ಇಂದು ಪ್ರಯಾಣ ಬೆಳೆಸಿದೆ. ಶನಿವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಿಂದ ಟೀಂ ಇಂಡಿಯಾ ಅಮೆರಿಕಕ್ಕೆ ಹಾರಿದೆ. ಮಿನಿ ವಿಶ್ವ ಸಮರಕ್ಕೆ ಟೀಂ ಇಂಡಿಯಾದ ಕೆಲವು ಆಟಗಾರರು ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಫೋಟೋಗಳು, ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ.

    ಇದನ್ನೂ ಓದಿ: ಛತ್ತೀಸ್​ಗಢದ ಬಿಜಾಪುರದಲ್ಲಿ 33 ನಕ್ಸಲೀಯರು ಶರಣಾಗತಿ

    ಟಿ20 ವಿಶ್ವಕಪ್‌: ಅಮೆರಿಕಕ್ಕೆ ಹಾರಿದ ಟೀಂ ಇಂಡಿಯಾದ ಮೊದಲ ಬ್ಯಾಚ್: ಐಪಿಎಲ್ ಬಳಿಕ 2ನೇ ಬ್ಯಾಚ್ ಪ್ರಯಾಣ

    ತಂಡದ ನಾಯಕ ರೋಹಿತ್ ಶರ್ಮಾ, ಆಲ್​ರೌಂಡರ್​ ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ಸೇರಿದಂತೆ ಹಲವು ಆಟಗಾರರು ವಿಶ್ವಕಪ್‌ಗೆ ತೆರಳುತ್ತಿರುವುದನ್ನು ಈ ವಿಡಿಯೋದಲ್ಲಿ ನಾವು ಕಾಣಬಹುದಾಗಿದೆ.
    ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿಯ ಸದಸ್ಯರು ಸಹ ಈ ಆಟಗಾರರೊಂದಿಗೆ ಪ್ರಯಾಣ ಬೆಳೆಸಿದ್ದಾರೆ.

    ಐಪಿಎಲ್ ಫೈನಲ್ ಆಡುವ ಆಟಗಾರರು ಮೇ 27 ರಂದು ಹೊರಡಲಿದ್ದಾರೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ಮತ್ತು ಜೂನ್ 9 ರಂದು ಪಾಕಿಸ್ತಾನದ ವಿರುದ್ಧ ಆಡಬೇಕಾಗಿದೆ.

    ಲಂಡನ್​ನಲ್ಲಿ ಹಾರ್ದಿಕ್ ಪಾಂಡ್ಯ?: ಈ ಎರಡನೇ ಬ್ಯಾಚ್​ನಲ್ಲಿ ವಿರಾಟ್ ಕೊಹ್ಲಿ, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್ ಮತ್ತು ಯಶಸ್ವಿ ಜೈಸ್ವಾಲ್ ಆಟಗಾರರು ಅಮೆರಿಕಕ್ಕೆ ತೆರಳಲಿದ್ದಾರೆ. ಉಳಿದಂತೆ ತಂಡದ ಉಪನಾಯಕ ಹಾರ್ದಿಕ್ ಪಾಂಡ್ಯ ಲಂಡನ್​ನಲ್ಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರು ಸೀದಾ ಅಲ್ಲಿಂದ ಅಮೆರಿಕಕ್ಕೆ ಹೋಗುತ್ತಾರೆ ಎನ್ನಲಾಗಿದೆ.

    ಭಾರತದ ವೇಳಾಪಟ್ಟಿ
    ಜೂನ್ 5 ರಂದು ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತ ತಂಡ ಟಿ20 ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಇದಾದ ಬಳಿಕ ಭಾರತ ಜೂನ್ 9ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಮೂರನೇ ಪಂದ್ಯದಲ್ಲಿ ಭಾರತ ಜೂನ್ 12 ರಂದು ಅಮೆರಿಕವನ್ನು ಎದುರಿಸಲಿದೆ. ಟೀಂ ಇಂಡಿಯಾದ ಗುಂಪು ಹಂತದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

    ವಿಶ್ವಕಪ್​ಗಾಗಿ ಟೀಂ ಇಂಡಿಯಾ ತಂಡ:
    ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

    ಛತ್ತೀಸ್‌ಗಢದ ಕಾರ್ಖಾನೆಯಲ್ಲಿ ಸ್ಫೋಟ: ವ್ಯಕ್ತಿ ಸಾವು, 6 ಮಂದಿಗೆ ಗಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts