ಹಾಸ್ಟೆಲ್​ ಕಟ್ಟಡಕ್ಕೆ ಅಪ್ಪಳಿಸಿ ವಿಮಾನ ಪತನಗೊಂಡ ಭಯಾನಕ ದೃಶ್ಯಗಳು ಇಲ್ಲಿವೆ ನೋಡಿ.. | Plane Crash

dk - 2025-06-13T192533.315
Published on

Plane Crash: ಭಾರತೀಯ ವಾಯುಯಾನ ಇತಿಹಾಸದಲ್ಲೇ ಅತ್ಯಂತ ಭೀಕರ ಅಪಘಾತವಾದ ಅಹಮದಾಬಾದ್​ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಾಸ್ಟೇಲ್​​ ಕಟ್ಟಡಕ್ಕೆ ಅಪ್ಪಳಿಸಿ ಪತನವಾದ ಭೀಕರ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ.

ಮಧ್ಯಾಹ್ನ 1.38 ಕ್ಕೆ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಎಲ್ಲರ ಮುಂದೆ ಮೇಘನಿ ನಗರದ ಬಿಜೆ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿದೆ. ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಅಪಘಾತದಿಂದ ದಟ್ಟವಾದ ಹೊಗೆ ಆವರಿಸಿದೆ. ವಿಮಾನದಲ್ಲಿದ್ದ 242 ಜನರಲ್ಲಿ ಒಬ್ಬರು ಮಾತ್ರ ಬದುಕುಳಿದರು. ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ 24 ಜನರು ಸಾವನ್ನಪ್ಪಿದರು. ಇನ್ನು ಹಾಸ್ಟೇಲ್​​ಗೆ ಅಪ್ಪಳಿಸಿದ ವಿಮಾನ ಪತನದ ಹಾಸ್ಟೆಲ್ ಮುಂಭಾಗದಲ್ಲಿರುವ ಕಟ್ಟಡದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯಗಳು ದಾಖಲಾಗಿವೆ. ಇದೀಗ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿವೆ.

ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯ..

ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯಗಳಲ್ಲಿ ವಿಮಾನ ಪತನ ಭಯಾನಕವಾಗಿದೆ. ವಿಮಾನ ಕಟ್ಟಡಕ್ಕೆ ಅಪ್ಪಳಿಸುತ್ತಿದ್ದಂತೆ ಬೃಹತ್​ ಮಟ್ಟದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಜತೆಗೆ ದೊಡ್ಡ ಮಟ್ಟದಲ್ಲಿ ಹೊಗೆ ಬರುತ್ತಿದೆ. ಕಟ್ಟಡದ ಮುಂಭಾಗದಲ್ಲಿ ಪಾರ್ಕಿಂಗ್​​ ಮಾಡಿದ್ದ ಕಾರುಗಳು ಪತನದ ರಭಸಕ್ಕೆ ಧ್ವಂಸಗೊಂಡಿವೆ. ಏಕಾಏಕಿ ಭಯಾನಕ ವಾತಾವರಣ ಮೂಡಿದ್ದು ಅಲ್ಲಿದ್ದ ಜನರು ಏನಾಗುತ್ತಿದೆ ಎಂಬ ಗೊಂದಲಕ್ಕೆ ಒಳಗಾಗಿದ್ದಾರೆ.

ಮಧ್ಯಾಹ್ನ ಟೇಕ್ ಆಫ್ ಆದ ಏರ್ ಇಂಡಿಯಾ ಎ1-171 ವಿಮಾನ ಕೇವಲ 32 ಸೆಕೆಂಡ್​ಗಳಲ್ಲಿ ಮೇಘಾನಿ ನಗರದ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನಗೊಂಡಿತು. ವಿದೇಶಿಯರೂ ಸೇರಿ 230 ಪ್ರಯಾಣಿಕರು, 12 ಸಿಬ್ಬಂದಿ ಹಾಗೂ ಹಾಸ್ಟೇಲ್​​ನಲ್ಲಿ ಊಟಕ್ಕೆ ಕೂತಿದ್ದ 24 ವೈದ್ಯಕೀಯ ವಿದ್ಯಾರ್ಥಿಗಳು ಸೇರಿ 265 ಮಂದಿ ಮೃತಪಟ್ಟಿದ್ದಾರೆ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net