16 C
Bangalore
Thursday, December 12, 2019

VIDEO| ಅಗ್ರೆಸಿವ್​​ನೆಸ್​ ನನ್ನ ಪ್ರವೃತ್ತಿಯಲ್ಲ ಎಂಬುದನ್ನು ಸಾಬೀತು ಪಡಿಸಿ, ಕ್ರೀಡಾ ಸ್ಫೂರ್ತಿ ಮೆರೆದ ವಿರಾಟ್​ ಕೊಹ್ಲಿ

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಲಂಡನ್​: ಅದ್ಭುತ ಬ್ಯಾಟಿಂಗ್​ ಹಾಗೂ ನಾಯಕತ್ವದಿಂದ ವಿಶ್ವಕಪ್​ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡುತ್ತಿರುವ ವಿರಾಟ್​ ಕೊಹ್ಲಿ ಅವರು ಅಗ್ರೆಸಿವ್​ ಆಟಗಾರ ಎಂಬ ಕುಖ್ಯಾತಿಗೂ ಹಲವು ಬಾರಿ ಒಳಗಾಗಿದ್ದಾರೆ. ಆದರೆ, ನಿನ್ನೆ(ಭಾನುವಾರ) ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಕ್ರೀಡಾ ಸ್ಫೂರ್ತಿ ಮೆರೆಯುವ ಮೂಲಕ ಅಗ್ರೆಸಿವ್​​ನೆಸ್​ ನನ್ನ ಪ್ರವೃತ್ತಿಯಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಕನ್ನಿಂಗ್ಟನ್​ನ ಓವಲ್​ ಮೈದಾನದಲ್ಲಿ ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯವು ಕ್ರೀಡಾ ಸ್ಫೂರ್ತಿಗೆ ಸಾಕ್ಷಿಯಾಯಿತು. ಆಸಿಸ್​ ತಂಡದ ನಾಯಕ ಸ್ಟೀವ್​ ಸ್ಮಿತ್​ ಬೌಂಡರಿ ಗೆರೆಯ ಬಳಿ ಕ್ಷೇತ್ರ ರಕ್ಷಣೆ ಮಾಡುವಾಗ ಟೀಂ ಇಂಡಿಯಾದ ಅಭಿಮಾನಿಗಳು ಸ್ಮಿತ್​ ಕಡೆ ನೋಡುತ್ತಾ, ಕೂಗುತ್ತಾ ಅಪಹಾಸ್ಯ ಮಾಡುತ್ತಿದ್ದರು. ಇದನ್ನು ಗಮನಿಸಿದ ಕೊಹ್ಲಿ ಮುಂದೆ ಬಂದು ಅಭಿಮಾನಿಗಳನ್ನು ಸುಮ್ಮನಿರುವಂತೆ ಹೇಳಿ, ಹೀಗೆ ಮಾಡುವುದರ ಬದಲು ಚಪ್ಪಾಳೆ ತಟ್ಟಿ ಹುರಿದುಂಬಿಸಿ ಎಂದು ಹೇಳುವ ಮೂಲಕ ಕ್ರೀಡಾ ಸ್ಫೂರ್ತಿಯನ್ನು ಮೆರೆದರು.

ಬಳಿಕ ನಾಯಕ ಸ್ಟೀವ್​ ಸ್ಮಿತ್​ ಅವರು ಕೊಹ್ಲಿ ಬಳಿ ಬಂದು ಬೆನ್ನುತಟ್ಟಿ ಧನ್ಯವಾದ ತಿಳಿಸಿದರು. ಆಸಿಸ್​ ಪಂದ್ಯ ಸೋತರು ಸ್ಮಿತ್​ ಕ್ರೀಡಾಭಿಮಾನಿಗಳ ಮನಗೆದ್ದರು. ಕೊಹ್ಲಿ ಪಂದ್ಯವನ್ನು ಗೆಲ್ಲುವುದರೊಂದಿಗೆ ಅಭಿಮಾನಿಗಳ ಮೆಚ್ಚುಗೆಯನ್ನು ಗಳಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಕೊಹ್ಲಿ ನಡೆಯನ್ನು ಮೆಚ್ಚಿ, ಹೊಗಳಿಕೆಯ ಸುರಿಮಳೆಗೈದಿದ್ದಾರೆ.

ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಆಸಿಸ್​ ನಾಯಕರಾಗಿದ್ದ ಸ್ಟೀವ್​ ಸ್ಮಿತ್​ ಹಾಗೂ ಉಪನಾಯಕರಾಗಿದ್ದ ಡೇವಿಡ್​ ವಾರ್ನರ್​ ಒಂದು ವರ್ಷಗಳ ಕಾಲ ನಿಷೇಧಕ್ಕೆ ಒಳಗಾಗಿದ್ದರು. ಪ್ರಕರಣದಿಂದ ವಿಮುಕ್ತರಾಗಿ ಮತ್ತೆ ಕ್ರಿಕೆಟ್​ಗೆ ಮರಳಿ ಬಂದ ದಿನದಿಂದ ಕ್ರೀಡಾಂಗಣದಲ್ಲಿ ಹಾಗೂ ಕ್ರೀಡಾಂಗಣದಾಚೆಗೆ ಜನರ ಗುಂಪು ಉಭಯ ಆಟಗಾರರನ್ನು ನೋಡಿದಾಗಲೆಲ್ಲ ಅಪಹಾಸ್ಯ ಮಾಡಿ ಅವರಿಗೆ ಮುಜುಗರವನ್ನು ಉಂಟು ಮಾಡುತ್ತಿದ್ದಾರೆ. ಇದೇ ಅನುಭವ ನಿನ್ನೆಯ ಪಂದ್ಯದಲ್ಲೂ ಸ್ಮಿತ್​ಗೆ ಆಗಿದೆ. ಆದರೆ, ಇದನ್ನು ಮನಗಂಡ ಕೊಹ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿದರು.

ಭಾನುವಾರ ಕೆನ್ನಿಂಗ್ಟನ್​​​​​​ ಓವಲ್​​ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್​​ ಗೆದ್ದು ಮೊದಲು ಬ್ಯಾಟಿಂಗ್​​ ಮಾಡಿದ ಭಾರತ 50 ಓವರ್​ಗಳಲ್ಲಿ 5 ವಿಕೆಟ್​​ ನಷ್ಟಕ್ಕೆ 352 ರನ್​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಹಾಲಿ ಚಾಂಪಿಯನ್ಸ್​​ ಆಸ್ಟ್ರೇಲಿಯಾ 50 ಓವರ್​ಗಳಲ್ಲಿ ಆಲೌಟ್​​​ ಆಗಿ 316 ರನ್​ ಗಳಿಸಲಷ್ಟೇ ಶಕ್ತವಾಯಿತು. (ಏಜೆನ್ಸೀಸ್​)

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...